ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಇಬ್ಬರ ಬಂಧನ

9:53 AM, Saturday, October 13th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

arrestedಮಂಗಳೂರು: ಇಲ್ಲಿನ ಹೊರವಲಯದ ವಳಚ್ಚಿಲ್ನಲ್ಲಿ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನೀರುಮಾರ್ಗದ ಉಳಬೈಲ್ ನಿವಾಸಿ ಇಮ್ರಾನ್ (24), ಪರಂಗಿಪೇಟೆ ಅರ್ಕುಳ ವಳಚ್ಚಿಲ್ಪದವು ನಿವಾಸಿ ಇಮ್ತಿಯಾಜ್ ಅಹಮ್ಮದ್ (33) ಬಂಧಿತರು. ಬಂಧಿತರಿಂದ 1.2 ಕೆಜಿ ಗಾಂಜಾ, 15,356 ರೂ. ನಗದು, ಮೊಬೈಲ್ ಫೋನ್ ಮತ್ತು ಬೈಕೊಂದನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English