ನವದೆಹಲಿ: ನಮ್ಮ ಸರ್ಕಾರ ಮಹಿಳೆಯರ ಸಮಸ್ಯೆಗಳನ್ನ ತೊಲಗಿಸುವ ಸಲುವಾಗಿಯೇ ಕೆಲಸ ಮಾಡುತ್ತಿದೆ. ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಕೆಲಸದ ಸಮಯದಲ್ಲಿ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ನವದೆಹಲಿಯಲ್ಲಿ ಎನ್ಎಚ್ಆರ್ಸಿ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಣ್ಣ ಮನಸಿನ ವ್ಯಕ್ತಿಗಳು ಮಗು ಹೆಣ್ಣಾಗಿದ್ದರೆ ಗರ್ಭತೆಗೆಯಿಸುವ ಕೆಲಸ ಮಾಡ್ತಿದ್ದಾರೆ. ಇದನ್ನ ನಿಲ್ಲಿಸಲು ಕಠಿಣ ಕಾನೂನು ಜಾರಿ ಮಾಡಲಾಗಿದೆ.
ಇನ್ನು ಎಲ್ಲ ರಾಜ್ಯಗಳಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಜಾರಿಗೆ ತಂದಿದ್ದೇವೆ. ಇದರಿಂದ ಹೆಣ್ಣುಮಗುವಿನ ಜನನ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದು ಪ್ರಧಾನಿ ಹೇಳಿದರು.
Click this button or press Ctrl+G to toggle between Kannada and English