ಬೆಂಗಳೂರು: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ವಿಚಾರ ಪ್ರತಿಕ್ರಿಯೆ ಕೊಡಲು ಸಚಿವೆ ಜಯಮಾಲ ನಿರಾಕರಿಸಿದ್ದಾರೆ.
ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಜಾಹೀರಾತು ಫಲಕಗಳಲ್ಲಿ ಕನ್ನಡ ಕಡ್ಡಾಯ ಕಾನೂನು ಜಾರಿ ವಿಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರು ಶಬರಿಮಲೆ ಬಗ್ಗೆ ಪ್ರಶ್ನೆ ಮಾಡ್ತಿದ್ದಂತೆ ನಮಸ್ಕಾರ ಎಂದು ಕೈಮುಗಿದು ತೆರಳಿದರು.
ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶ ಬಗ್ಗೆ ನೀಡಿದ ಆದೇಶ ಸ್ವಾಗಿತಿಸಿದ್ರು. ಆದರೆ, ಇದೀಗ ಕೇರಳದಲ್ಲಿ ಮಹಿಳೆಯರ ಪ್ರವೇಶದ ಬಗ್ಗೆ ಗಲಾಟೆ ಆಗ್ತಿದ್ದಂತೆ ಮೌನ ವಹಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಜಾಹೀರಾತು ಫಲಕಗಳಲ್ಲಿ ಕನ್ನಡ ಕಡ್ಡಾಯ ಕಾನೂನು ಜಾರಿ ವಿಚಾರ. ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗಿನ ಸಚಿವರ ಸಭೆ ಮುಕ್ತಾಯದ ನಂತರ ಮಾತನಾಡಿ, ಈ ಬಗ್ಗೆ ಅಧಿಕಾರಿಗಳೊಂದಿಗೆ ಇಂದು ಚರ್ಚೆ ನಡೆಸಿದ್ದೇನೆ. ಕಾಯ್ದೆ ಜಾರಿ ಕುರಿತಾದ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಬೆಳಗಾವಿ ಅಧಿವೇಶನ ಒಳಗೆ ಕಾಯ್ದೆಗೆ ತಿದ್ದುಪಡಿ ತಂದು ಕಾನೂನು ಕಡ್ಡಾಯಗೊಳಿಸ್ತೇವೆ ಎಂದು ತಿಳಿಸಿದರು.
Click this button or press Ctrl+G to toggle between Kannada and English