ಅಯೋಧ್ಯ ವಿವಾದದ ತೀರ್ಪು ಮುಂದಕ್ಕೆ : ಜಿಲ್ಲಾಡಳಿತ ಹೊರಡಿಸಿರುವ ಆದೇಶ ರದ್ದು

7:17 PM, Thursday, September 23rd, 2010
Share
1 Star2 Stars3 Stars4 Stars5 Stars
(No Ratings Yet)
Loading...

ಅಯೋಧ್ಯೆಮಂಗಳೂರು : ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯವು ತಡೆಹಿಡಿದ ಹಿನ್ನಲೆಯಲ್ಲಿ ಶುಕ್ರವಾರ ಪ್ರಕಟವಾಗಬೇಕಿದ್ದ ತೀರ್ಪು ಸೆಪ್ಟೆಂಬರ್ 28 ಕ್ಕೆ ಮುಂದೂಡಲಾಗಿದೆ.
ರಮೇಶ್ ಚಂದ್ರ ತ್ರಿಪಾಠಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಹಿನ್ನಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಲಕ್ನೋ ವಿಶೇಷ ಪೀಠವು ಶುಕ್ರವಾರ ಅಪರಾಹ್ನ ಪ್ರಕಟಿಸ ಬೇಕಿದ್ದ ತೀರ್ಪನ್ನು ಮುಂದೂಡಿದೆ.
ತ್ರಿಪಾಠಿಯ  ಅರ್ಜಿಯನ್ನು ಮತ್ತೊಂದು ಪೀಠವು ವಿಚಾರಣೆ ನಡೆಸಲಿದ್ದು.  ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ನ್ಯಾಯಾಲಯ ಮುಂದೂಡಿ, ಆ ತನಕ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ.
ಜಿಲ್ಲಾಡಳಿತ ಹೊರಡಿಸಿರುವ  ಆದೇಶ ರದ್ದು
ಅಯೋಧ್ಯೆ ತೀರ್ಪು ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟ ದಿನಾಂಕವನ್ನು ಮುಂದೂಡಿದ ಕಾರಣ ದಕ್ಷಿಣಕನ್ನಡ ಜಿಲ್ಲಾಡಳಿತ ಹೊರಡಿಸಿರುವ ಎಲ್ಲಾ ಆದೇಶ(ಸೆಕ್ಷನ್, ಶಾಲಾಕಾಲೇಜುರಜೆ, ಮದ್ಯದಂಗಡಿಬಂದ್ ಇತ್ಯಾದಿ)ಗಳು ರದ್ದಾಗಿರುತ್ತದೆಂದು ದ.ಕ. ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English