ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಲಿನಿಕಲ್ ಸೌಲಭ್ಯ ಪಡೆಯುತ್ತಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಸರ್ಕಾರಿ ಕೋಟಾದ ಗೃಹ ವೈದ್ಯರು ಮತ್ತು ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳಿಗೆ 8 ತಿಂಗಳಿನಿಂದ ಶಿಷ್ಯವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಇಂದು ವೈದ್ಯ ವಿದ್ಯಾರ್ಥಿಗಳು ನಗರದ ವೆನ್ಲಾಕ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಮಾತನಾಡಿದ ವೈದ್ಯ ವಿದ್ಯಾರ್ಥಿಗಳು, ದಿನದ 24 ಗಂಟೆಗಳ ಕಾಲ ದುಡಿಯುತ್ತೇವೆ. ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂಬ ಭೀತಿಯಿದೆ. ಆದರೂ ನಾವು ಎಲ್ಲಾ ರೀತಿಯಲ್ಲಿ ರೋಗಿಗಳ ಶುಶ್ರೂಷೆಯನ್ನು ಮಾಡುತ್ತಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನಿಗದಿಪಡಿಸಿ, ಆದೇಶ ಹೊರಡಿಸಿತ್ತು. ಆದರೆ ನಮಗೆ 8 ತಿಂಗಳಿನಿಂದ ಯಾವುದೇ ಶಿಷ್ಯವೇತನ ಬಂದಿಲ್ಲವೆಂದು ವಿದ್ಯಾರ್ಥಿಗಳು ದೂರಿದರು.
ಈ ನಡುವೆ ಮುಖ್ಯಮಂತ್ರಿ ಕುಮಾರಸ್ವಾಮಿ, ಆರೋಗ್ಯ ಸಚಿವರು ಹಾಗೂ ಶಿಕ್ಷಣ ಸಚಿವರಿಗೆ ತಿಳಿಸಿದ್ದರೂ ನಮ್ಮ ಮನವಿಗೆ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲ ಎಂದು ವೈದ್ಯ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡರು.
Click this button or press Ctrl+G to toggle between Kannada and English