ಮಂಗಳೂರು: ಸುರತ್ಕಲ್ ಎನ್.ಐ.ಟಿ.ಕೆ ಬಳಿ ಇರುವ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಡೆಸುತ್ತಿರುವ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಎನ್.ಐ.ಟಿ.ಕೆ ಟೋಲ್ ಗೇಟ್ ನಲ್ಲಿ ಸುಂಕ ವಸೂಲಿ ಒಪ್ಪಂದ ಅಕ್ಟೋಬರ್ 30 ಕ್ಕೆ ಕೊನೆಗೊಳ್ಳಲಿದೆ. ಮುಂದೆ ನವೀಕರಣಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿ ನಿನ್ನೆಯಿಂದ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸಿದೆ.
ಹೋರಾಟ ಸಮಿತಿಯ ಮುಖಂಡ, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮಾಜಿ ಶಾಸಕ ವಿಜಯಕುಮಾರ್ ಶೇಟ್ಟಿ ಸೇರಿದಂತೆ ವಿವಿಧ ಮುಖಂಡರುಗಳ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ನೂರಾರು ಮಂದಿ ಪಾಲ್ಗೊಂಡು ಅಕ್ಟೋಬರ್ 30 ಕ್ಕೆ ಟೋಲ್ ಗೇಟ್ ಬಂದ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಂಗಳೂರು ನಗರ ಪಾಲಿಕೆ ಸದಸ್ಯರುಗಳು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
Click this button or press Ctrl+G to toggle between Kannada and English