- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜನರ ಮರಳು ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮಧ್ಯೆ ಪ್ರವೇಶಿಸಬೇಕೆಂದು ಕೋರಿ ಮನವಿ

mangaluru [1]ಮಂಗಳೂರು: ಕಳೆದ ಹಲವು ತಿಂಗಳುಗಳಿಂದ ಕರಾವಳಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡಿದೆ. ದ.ಕ.ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮರಳು ನದಿಗಳಲ್ಲಿ ದೊರೆಯುತ್ತಿದ್ದರೂ ರಾಜ್ಯ ಸರ್ಕಾರ ಮರಳು ನೀತಿ ತರಲಿದೆಯೆಂದು ಮರಳುಗಾರಿಕೆಗೆ ಅವಕಾಶ ನೀಡಲು ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸುತ್ತಿದೆ. ಮರಳು ಸಮಸ್ಯೆಯಿಂದಾಗಿ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರವು ಸಂಪೂರ್ಣವಾಗಿ ನೆಲಕಚ್ಚಿದೆ.ದುಡಿಮೆಯನ್ನೇ ನಂಬಿ ಸಾಲ ಮಾಡಿ ಕುಟುಂಬ ನಿರ್ವಹಿಸುತ್ತಿದ್ದ ಸಾವಿರಾರು ಕುಟುಂಬಗಳು ಕೆಲಸ ಇಲ್ಲದೆ ಸಂಕಷ್ಟದಲ್ಲಿದೆ.

ಮರಳು ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಜಿಲ್ಲಾಡಳಿತವೇ ಕಟ್ಟಡ ಕಾರ್ಮಿಕರಿಗೆ ಕೆಲಸ ನಿರಾಕರಣೆ ಮಾಡಿದಂತಾಗಿದೆ. ಕಟ್ಟಡ ಕಾರ್ಮಿಕರಲ್ಲದೆ ಸಣ್ಣ ಗುತ್ತಿಗೆದಾರರು ಸಂಕಷ್ಟಗೊಳಗಾಗಿದ್ದಾರೆ. ಮರಳು ಕೃತಕ ಅಭಾವದಿಂದಾಗಿ ನಿರ್ಮಾಣ ಕ್ಷೇತ್ರದ ಜೊತೆ ಸಂಬಂಧವಿರುವ ಎಲ್ಲಾ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದೆ. ಹೀಗಾಗಿ ಕಟ್ಟಡ ಕಾರ್ಮಿಕರಿಗೆ ಕುಟುಂಬ ನಿರ್ವಹಣೆ ಮಾಡಲು ಉದ್ಯೋಗವೇ ಇಲ್ಲವೆಂಬ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಆದ್ದರಿಂದ ತಾವು ಶೀಘ್ರವಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ಜನರ ಮರಳು ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮಧ್ಯೆ ಪ್ರವೇಶಿಸಬೇಕೆಂದು ತಮ್ಮನ್ನು ಮನವಿಯ ಮುಖಾಂತರ ಒತ್ತಾಯಿಸುತ್ತಿದ್ದೇವೆ. ಸಮಸ್ಯೆಗೆ ಪರಿಹಾರ ಸಿಗದೇ ಹೋದಲ್ಲಿ ಕಟ್ಟಡ ಕಾರ್ಮಿಕರು ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ, ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ.

ಬೇಡಿಕೆಗಳು:
1.ಜಿಲ್ಲೆಯ ಮರಳು ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು.
2.ಸರಕಾರವೇ ಮರಳುಗಾರಿಕೆ ನಡೆಸಿ ದಾಸ್ತಾನು ಮಾಡಿ ಜನರಿಗೆ ಕಡಿಮೆ ದರದಲ್ಲಿ ಮರಳು ವಿತರಣೆ ಮಾಡಬೇಕು.
3.ಕಳೆದ ಹಲವು ತಿಂಗಳುಗಳಿಂದ ಮರಳು ಸಮಸ್ಯೆಯಿಂದ ಕೆಲಸ ನಿರಾಕರಣೆ ಆದ ಕಟ್ಟಡ ಕಾರ್ಮಿಕರಿಗೆ ಪರಿಹಾರ ಒದಗಿಸಬೇಕು.
4.ಕರಾವಳಿ ಜಿಲ್ಲೆಗಳಲ್ಲಿ ಜನಪರ ಮರಳು ನೀತಿ ರೂಪಿಸಬೇಕು.
5.ಜಿಲ್ಲೆಯಲ್ಲಿ ದೊರೆಯುವ ಮರಳು ಜಿಲ್ಲೆಯ ಜನರಿಗೆ ಸಿಗುವ ರೀತಿಯಲ್ಲಿ ಮೊದಲ ಆದ್ಯತೆ ನೀಡಬೇಕು…
AW ತೇಜೋಮಯ ರವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು .
ನಿಯೋಗದಲ್ಲಿ ಫೆಡರೇಶನ್ ನ ಜಿಲ್ಲಾ ಪ್ರದಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು, ಉಪಾದ್ಯಕ್ಷರಾದ ಜನಾರ್ದನ್ ಕುತ್ತಾರ್ , ಇಬ್ರಾಹಿಂ ಅಂಬ್ಲಮೊಗರು ತಿಮ್ಮಯ್ಯ ಕೊಂಚಾಡಿ , ನಾಗೇಶ್ ಕೋಟ್ಯಾನ್ ಇದ್ದರು .