ಬೆಂಗಳೂರು: ಉದರ ಬೇನೆಯ ಕಾರಣದಿಂದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದ ಬಾಕ್ವೆಟ್ ಹಾಲ್ನಲ್ಲಿ ಇಂದು ಬೆಳಗ್ಗೆ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಅವರು ವಾಲ್ಮೀಕಿ ಪ್ರಶಸ್ತಿಯನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಪ್ರದಾನ ಮಾಡಬೇಕಾಗಿತ್ತು. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಎಂ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಅದೇ ರೀತಿ ಇಂದು ಮಧ್ಯಾಹ್ನ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಭೆ ಕೂಡ ರದ್ದುಪಡಿಸಲಾಗಿದೆ.
Click this button or press Ctrl+G to toggle between Kannada and English