ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದ ಡಿಸಿಎಂ

3:46 PM, Thursday, October 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

parameshwarಬೆಂಗಳೂರು: ಎಲ್ಲದಕ್ಕೂ ನಿಮಗೆ ಕೋರ್ಟ್ ಹೇಳಬೇಕಾ? ಸರ್ಕಾರದ ಇರುವುದು ಯಾಕೆ, ನಾವೆಲ್ಲ ಇರುವುದು ಏಕೆ? ನಿಮಗೆ ಜವಾಬ್ದಾರಿ ಇಲ್ಲವೇ ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಜಿ. ಪರಮೇಶ್ವರ್ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ವಿಕಾಸಸೌಧದಲ್ಲಿ ಇಂದು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ ಗರಂ ಆದ ಡಿಸಿಎಂ, ಕೆಲಸ ಮಾಡದೆ ಸುಮ್ಮನೆ ಕುಳಿತು ಸರ್ಕಾರದ ಮೇಲೆ ನ್ಯಾಯಾಲಯ ಚಾಟಿ ಬೀಸುವಂತೆ ಮಾಡುತ್ತೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಿಮಗೆ ಕರ್ತವ್ಯ ನಿರ್ವಹಣೆ ಮಾಡೋಕೆ ಏನು ಸಮಸ್ಯೆ? ನಿಮ್ಮ ಕೆಲಸಕ್ಕೆ ಯಾರಾದರೂ ಅಡ್ಡಿ ಆಗಿದ್ದರೆ ಹೇಳಿ ಎಂದು ಪ್ರಶ್ನಿಸಿದ ಪರಮೇಶ್ವರ್, ನಿಮ್ಮಿಂದಾಗಿ ಸರ್ಕಾರಕ್ಕೆ ಮುಜುಗರ ಆಗಿದೆ. ಎಲ್ಲೆಡೆ ರಸ್ತೆ ಗುಂಡಿ ಮುಚ್ಚಿಲ್ಲ ಎನ್ನುವುದು ಗೊತ್ತು. ವೈಟ್ ಟಾಪಿಂಗ್, ಕಸದ ಸಮಸ್ಯೆ ಎಲ್ಲ ಏನಾಗಿದೆ? ಮತ್ತೆ ಅದರ ಬಗ್ಗೆ ಕೋರ್ಟ್ ಹೇಳಬೇಕಾ? ಮತ್ತೊಮ್ಮೆ ಇಂತಹ ಘಟನೆ ಮರುಕಳಿಸಬಾರದು. ನಿಗದಿತ ಸಮಯದೊಳಗೆ ಎಲ್ಲ ಕೆಲಸ ಆಗಬೇಕು ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಎಚ್ಚರಿಕೆ ನೀಡಿದರು.

ಮೇಯರ್ ಗಂಗಾಂಬಿಕೆ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English