ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರದ ವಿಚಾರದಲ್ಲಿ ನಡೆದ ವಾದ ವಿವಾದದಲ್ಲಿ ಚೈತ್ರಾ ಕುಂದಾಪುರ ಮತ್ತು ತಂಡ ನಿನ್ನೆ ಹಿಂದೂ ಜಾಗರಣ ವೇದಿಕೆಯ ಮುಖಂಡನಿಗೆ ನಡೆಸಿದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ ಆಚರಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ನಿನ್ನೆ ಸಂಜೆ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಮತ್ತು ಇತರರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಬಂದ್‌ಗೆ ಕರೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದಲ್ಲಿ ಅಂಗಡಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ನಡೆಸಿದರು. ಚೈತ್ರಾ ಕುಂದಾಪುರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೆರವಣಿಗೆ ಜಾಥಾ ನಗರದ ಮುಖ್ಯ ಪೇಟೆಯಿಂದ ಕುಮಾರಧಾರಾ ನದಿಯತನಕ ತೆರಳಿತು. ಸುಮಾರು 500ಕ್ಕೂ ಅಧಿಕ ಮಂದಿ ಪ್ರತಿಭಟನೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಘಟನೆಯಲ್ಲಿ ಚೈತ್ರಾ ಕುಂದಾಪುರ ಹಾಗೂ ಇತರ ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
Click this button or press Ctrl+G to toggle between Kannada and English