ಮಂಗಳೂರು: ಸುರತ್ಕಲ್ನಲ್ಲಿರುವ ಅಕ್ರಮ ಟೋಲ್ ಗೇಟ್ ಮುಚ್ಚಬೇಕೆಂದು ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಟೋಲ್ ಗೇಟ್ ಗುತ್ತಿಗೆ ನವೀಕರಣ ವಿರುದ್ಧ ಹೋರಾಟ ನಡೆಯುತ್ತಿರುವಂತೆಯೇ, ಹೆದ್ದಾರಿ ಪ್ರಾಧಿಕಾರ ಒಂದು ವರ್ಷಕ್ಕೆ ಟೋಲ್ ಗುತ್ತಿಗೆಯನ್ನು ಮತ್ತೊಮ್ಮೆ ನವೀಕರಿಸಿದೆ ಎಂಬ ಸುದ್ದಿ ಹರಡಿತ್ತು. ಇದರಿಂದ ಧರಣಿ ನಿರತರು ಆಕ್ರೋಶ ಭರಿತರಾಗಿ ಘೋಷಣೆ ಕೂಗಲಾರಂಭಿಸಿದರು.
ಜಿಲ್ಲಾಧಿಕಾರಿ ಪರವಾಗಿ, ಎಸಿ ರವಿಚಂದ್ರ ನಾಯಕ್ ಅವರು ಧರಣಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿ ಬೇಡಿಕೆಗಳನ್ನು ಆಲಿಸಿದರು. ಈ ಸಂದರ್ಭ ಮಾಜಿ ಉಪಮೇಯರ್ ಪುರುಷೋತ್ತಮ ಚಿತ್ರಾಪುರ ಮಾತನಾಡಿ, ನಮ್ಮ ಬೇಡಿಕೆ ನ್ಯಾಯಯುತವಾಗಿದ್ದು, ಹೋರಾಟ ನೈತಿಕವಾಗಿ ಗೆಲ್ಲುತ್ತದೆ. ಸಂಸದ ನಳಿನ್ ಕುಮಾರ್ ಜನತೆಯ ಬೇಡಿಕೆಗಳಿಗೆ ಕುರುಡಾಗಿದ್ದಾರೆ ಎಂದು ದೂರಿದರು.
ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಧರಣಿಯಲ್ಲಿ ಮಾಜಿ ಶಾಸಕ ವಿಜಯ್ ಕುಮಾರ್ ಶೆಟ್ಟಿ, ಆರ್.ಡಿ.ಕಿಣಿ, ವೈ ರಮಾನಂದ ರಾವ್, ಸತ್ಯೇಂದ್ರ ಶೆಟ್ಟಿ, ಮುನಾವರ್ ಕುತ್ತಾರ್, ಕಮಲಾಕ್ಷ ಬಜಾಲ್, ಅಬೂಬಕ್ಕರ್ ಕಾಟಿಪಳ್ಳ ಭಾಗವಹಿಸಿದ್ದರು.
Click this button or press Ctrl+G to toggle between Kannada and English