ಅಪ್ರಾಪ್ತೆ ಜತೆ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯ ಬಂಧನ!

12:04 PM, Thursday, November 1st, 2018
Share
1 Star2 Stars3 Stars4 Stars5 Stars
(No Ratings Yet)
Loading...

police-arrestedಮಂಗಳೂರು: ಅಪ್ರಾಪ್ತೆ ಜತೆ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭವತಿಯಾಗಿರಿಸಿರುವ ಆರೋಪದ ಮೇರೆಗೆ ಪೊಕ್ಸೊ ಪ್ರಕರಣ ದಾಖಲಿಸಿ ಓರ್ವನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ನಿವಾಸಿ ಸುರೇಂದ್ರ(18) ಬಂಧಿತ ಆರೋಪಿ. ಆರೋಪಿ ಸುರೇಂದ್ರ ಸುಮಾರು ಒಂದು ವರ್ಷಗಳ ಹಿಂದೆ ಪರಿಚಯವಾದ 14 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪರಿಣಾಮ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಳು. ಈ ಸಂದರ್ಭ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಹೆತ್ತವರು ಧರ್ಮಸ್ಥಳದ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬಾಲಕಿಯ ಹೆತ್ತವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಧರ್ಮಸ್ಥಳ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮೇಲೆ ಪೊಕ್ಸೊ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English