ರಾಮನಗರದ ಮೊದಲ ಮಹಿಳಾ ಶಾಸಕಿಯಾಗಿ ಅನಿತಾ ಕುಮಾರಸ್ವಾಮಿ ಆಯ್ಕೆ!

12:55 PM, Tuesday, November 6th, 2018
Share
1 Star2 Stars3 Stars4 Stars5 Stars
(No Ratings Yet)
Loading...

anitha-kumarswamyರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕೊನೆಯ ಹಾಗೂ 20ನೇ ಸುತ್ತು ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿ ಈ ಕ್ಷೇತ್ರದ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಉಪಸಮರದಲ್ಲಿ ಒಟ್ಟು 1,25,043 ಮತಗಳನ್ನು ಅನಿತಾ ಕುಮಾರಸ್ವಾಮಿ ಪಡೆದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ 15,906 ಮತಗಳನ್ನು ಪಡೆದು ಭಾರೀ ಅಂತರದಿಂದ ಸೋಲು ಕಂಡಿದ್ದಾರೆ.

ಇನ್ನು ಅನಿತಾ ಕುಮಾರಸ್ವಾಮಿ ಸುಮಾರು ಒಂದು ಲಕ್ಷ ಮತಗಳಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಈ ಕೊನೆಯ ಸುತ್ತಿನ ಮತ ಎಣಿಕೆಯಲ್ಲಿ ಒಟ್ಟು 2,909 ನೋಟಾ ಮತಗಳು ಚಲಾವಣೆಯಾಗಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English