ಮಂಗಳೂರು: ಟಿಪ್ಪು ಜಯಂತಿಯನ್ನು ಕದ್ದು ಮುಚ್ಚಿ ಆಚರಿಸುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಇದು ಆಗಬಾರದು ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಹೇಳಿದ್ದಾರೆ.
ದ.ಕ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ದಕ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಇಂದು ಬೆಳಗ್ಗೆ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.
ಇದು ಸಾರ್ವಜನಿಕ ಜಯಂತಿ ಆಗಬೇಕಾದರೆ ಮುಂದಿನ ದಿನಗಳಲ್ಲಾದರೂ ಇದು ಪುರಭವನದಲ್ಲಿ ಆಚರಿಸುವಂತಾಗಬೇಕು. ಆಗ ಅರ್ಥಪೂರ್ಣ ಆಚರಣೆ ಆಗುತ್ತದೆ ಎಂದರು.
ಈ ಸಂದರ್ಭ ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎ.ಉದಯ ಕುಮಾರ್ ವಿಶೇಷ ಉಪನ್ಯಾಸ ನೀಡಿದರು. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಟಿ ಆರ್ ಸುರೇಶ್, ಮಂಗಳೂರು ಮೇಯರ್ ಭಾಸ್ಕರ ಕೆ, ದಕ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿಕಾಂತೇ ಗೌಡ, ಅಪರ ಜಿಲ್ಲಾಧಿಕಾರಿ ಕುಮಾರ್ ಎಸ್ ಮತ್ತಿತ್ತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English