ಬೆಂಗಳೂರು: ಕೇಂದ್ರ ಸಚಿವ ಹೆಚ್.ಎನ್. ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಶೋಕಾಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂತಾಪ ಸೂಚಕವಾಗಿ ರಾಜ್ಯ ಸರ್ಕಾರ ಸರ್ಕಾರ ರಜೆ ಘೋಷಿಸಿದೆ. ಈ ವೇಳೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಮಾರಂಭಗಳ ಆಯೋಜನೆ ಮಾಡದಂತೆ ಸುತ್ತೋಲೆ ಹೊರಡಿಸಿದೆ.
ಈ ನಡುವೆ ಮೈಸೂರು ವಿವಿ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಮೈಸೂರು ವಿವಿ ಆದೇಶ ಹೊರಡಿಸಿದೆ. ಇತರೆ ವಿವಿಗಳ ಪರೀಕ್ಷೆಗಳು ಇದ್ದರೂ ಮುಂದೂಡುವಂತೆ ಶಿಕ್ಷಣ ಇಲಾಖೆ ವಿವಿಗಳಿಗೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಮೈಸೂರು ವಿವಿ, ಮಂಗಳೂರು ವಿವಿ, ಶಿವಮೊಗ್ಗ ಕುವೆಂಪು ವಿವಿ, ಅಕ್ಕಮಹಾದೇವಿ ಮಹಿಳಾ ವಿವಿ ವಿಜಯಪುರದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆಯಾ ವಿವಿಯ ಕುಲಸಚಿವರು ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಮುಂದೂಡಲ್ಪಟ್ಟ ಪರೀಕ್ಷಾ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಚೇರಿಗಳಿಗೆ (ತುರ್ತು ಸೇವೆ ಹೊರತು ಪಡಿಸಿ – ಆರೋಗ್ಯ, ಮಾರುಕಟ್ಟೆ) ಮೃತರ ಗೌರವಾರ್ಥ ರಜೆಯನ್ನು ಮಹಾಪೌರರು ಹಾಗೂ ಆಯುಕ್ತರು ಘೋಷಿಸಿದ್ದಾರೆ.
ಅಲ್ಲದೆ ಇಂದು ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಡೆಯಬೇಕಿದ್ದ ಎಂಬಿಎ ಸೀಟು ಹಂಚಿಕೆ ಮತ್ತು ಕೌನ್ಸಿಲಿಂಗ್ ಪ್ರಕ್ರಿಯೆಯನ್ನ ನಾಳೆಗೆ ಮುಂದೂಡಲಾಗಿದೆ. ಈ ಸಂಬಂಧ ಸಿಬಿಎಸ್ಎಂಎಸ್ ಪ್ರಕಟಣೆಯಲ್ಲಿ ತಿಳಿಸಿದೆ.
Click this button or press Ctrl+G to toggle between Kannada and English