ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ರಿಂದ ಅನಂತ ಕುಮಾರ್ ಗೆ ಅಂತಿಮ ನಮನ

2:31 PM, Monday, November 12th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Ananth Kumarಮಂಗಳೂರು  : ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ಅನಂತ ಕುಮಾರ್ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ , ಹೈಕೋರ್ಟ್ ವಕೀಲರಾದ ಎಸ್ ಪವನ್ ಚಂದ್ರ ಶೆಟ್ಟಿ ಪಡೆದು ಅಗಲಿದ ಮಹಾನ್ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾಗಿದ್ದ, ಅಟಲ್ ಜಿ, ಅಡ್ವಾಣಿಜಿ, ನರೇಂದ್ರ ಮೋದಿಜಿ ಅವರ ಆತ್ಮೀಯರಾಗಿದ್ದ, ಸಂಘದ ಶಿಸ್ತಿನ ಸಿಪಾಯಾಗಿ, ಕೇಂದ್ರದಲ್ಲಿ ಮಂತ್ರಿಯಾಗಿ ಕರ್ನಾಟಕಕ್ಕೆ ಅನೇಕ ಯೋಜನೆಗಳನ್ನು ನೀಡಿದ್ದರು .
ಮಂಗಳೂರಿಗೆ ಕೊಡುಗೆ : ವಿಮಾನಯಾನ ಸಚಿವರಾಗಿದ್ದಾಗ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಮುತುವರ್ಜಿ, ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ಸಚಿವರಾಗಿದ್ದಾಗ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ರಸಗೊಬ್ಬರ ಇಲಾಖೆಯಿಂದ ಕೃಷಿಕರಿಗೆ ಸಿಗಬೇಕಾದ ಸಕಲ ಯೋಜನೆ ಸಿಗುವಂತೆ  ಶ್ರಮ, ಮಂಗಳೂರಿನ ಎಂಸಿಎಫ್ ಪುನಶ್ಚೇತನಕ್ಕೆ ಶ್ರಮ, ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗುವ ಬಡ ಜನರಿಗೆ ಕಡಿಮೆ ಬೆಲೆಯಲ್ಲಿ ಜೆನೆರಿಕ್ ಔಷಧದ ಮೂಲಕ ಜನಸಾಮಾನ್ಯರಿಗೆ ಕಡಿಮೆ ಖರ್ಚಿನಲ್ಲಿ ಔಷಧಿ, ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ರೂಪುರೇಶೆ .

ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್  ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೆ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು  ಸಂತಾಪ ಸೂಚಿಸಿದ್ದಾರೆ .

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English