ಐಸಿಸಿ ಏಕದಿನ ರ‍್ಯಾಂಕಿಂಗ್: ನಂಬರ್​ 1 ಸ್ಥಾನದಲ್ಲಿ ಕೊಹ್ಲಿ, ಬುಮ್ರಾ

4:48 PM, Tuesday, November 13th, 2018
Share
1 Star2 Stars3 Stars4 Stars5 Stars
(No Ratings Yet)
Loading...

virat-kohliದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಇಂದು ಏಕದಿನ ಶ್ರೇಯಾಂಕ ಪಟ್ಟಿ ರಿಲೀಸ್ ಮಾಡಿದ್ದು, ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ನಂಬರ್ 1ಸ್ಥಾನದಲ್ಲಿದ್ದು, ಬೌಲಿಂಗ್ ವಿಭಾಗದಲ್ಲಿ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬೂಮ್ರಾ ನಂಬರ್ ಸ್ಥಾನದಲ್ಲಿ ಮುಂದುವರೆದಿದ್ದಾರೆ.

899 ಅಂಕ ಪಡೆದಿರುವ ವಿರಾಟ್ ಕೊಹ್ಲಿ ನಂಬರ್ 1ಸ್ಥಾನ ಹಾಗೂ 871 ಅಂಕ ಹೊಂದಿರುವ ರೋಹಿತ್ ಶರ್ಮಾ ಬ್ಯಾಟಿಂಗ್ ವಿಭಾಗದಲ್ಲಿ ನಂಬರ್ 2 ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ಬ್ಯಾಟ್ಸ್ಮನ್ ರಾಸ್ ಟೇಲರ್ ತಮ್ಮ ವೃತ್ತಿ ಜೀವನದಲ್ಲಿ 3ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಉಳಿದಂತೆ ದಕ್ಷಿಣ ಆಫ್ರಿಕಾದ ಬ್ಯಾಟ್ಸಮನ್ ಫಾಫು ಡುಪ್ಲೆಸಿಸ್ ನಂಬರ್ 7ನೇ ಸ್ಥಾನ, ನ್ಯೂಜಿಲೆಂಡ್ನ ಕೇನ್ ವಿಲಿಯಮ್ಸನ್ ನಂಬರ್ 9 ಹಾಗೂ ಡಿಕಾಕ್ 10ನೇ ಸ್ಥಾನದಲ್ಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ 841 ಅಂಕ ಪಡೆದಿರುವ ಜಸ್ಪ್ರೀತ್ ಬೂಮ್ರಾ ನಂಬರ್ 1ಸ್ಥಾನ, ಸ್ಪಿನ್ನರ್ ಕುಲ್ದೀಪ್ ಯಾದವ್ ನಂಬರ್ 3ನೇ ಸ್ಥಾನ ಹಾಗೂ ಯಜುವೇಂದ್ರ ಚಹಾಲ್ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಅಫ್ಘಾನಿಸ್ತಾನದ ರಾಶೀದ್ ಖಾನ್ ನಂಬರ್ 2ಸ್ಥಾನದಲ್ಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English