ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ದ.ಕ. ಜಿಲ್ಲೆ ವಿಶಿಷ್ಟ ಸಾಧನೆ ಮಾಡಿದ್ದು, ದೇಶಕ್ಕೆ ಮಾದರಿಯಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು. ದ.ಕ. ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ವತಿಯಿಂದ ಕುಲಶೇಖರ ಡೇರಿ ಆವರಣದಲ್ಲಿ 65ನೇ ಸಹಕಾರ ಸಪ್ತಾಹದ ಅಂಗವಾಗಿ ಬುಧವಾರ ಆಯೋಜಿಸಿದ ಸಹಕಾರಿ ಮಾರಾಟ, ಸಂಸ್ಕರಣ ಮತ್ತು ಶೇಖರಣೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಸಂಸದ ನಳಿನ್ ಕುಮಾರ್ ಕಟೀಲು, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ ಭಟ್, ಮೇಯರ್ ಭಾಸ್ಕರ ಕೆ., ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್, ಇಲಾಖೆ ಅಧಿಕಾರಿ ಮಂಜುನಾಥ್ ಅತಿಥಿಗಳಾಗಿದ್ದರು. ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಡಾ. ಕೆ.ಎಂ. ಕೃಷ್ಣ ಭಟ್ ಕೊಂಕೋಡಿ, ಪದ್ಮನಾಭ ಶೆಟ್ಟಿ ಅರ್ಕಜೆ, ಹದ್ದೂರು ರಾಜೀವ ಶೆಟ್ಟಿ, ವೀಣಾ ಆರ್. ರೈ, ಜಾನಕಿ ಹಂದೆ, ಟಿ. ಸೂರ್ಯ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ನವೀನ್‌ಚಂದ್ರ ಜೈನ್, ನರಹರಿ ಪ್ರಭು, ಉದಯ ಎಸ್. ಕೋಟ್ಯಾನ್, ಮಾರುಕಟ್ಟೆ ವ್ಯವಸ್ಥಾಪಕ ಜಯದೇವಪ್ಪ ಕೆ. ಉಪಸ್ಥಿತರಿದ್ದರು.
ದ.ಕ. ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ ಹೆಗ್ಡೆ ಸ್ವಾಗತಿಸಿದರು. ವ್ಯವಸ್ಥಾಪಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ ಪ್ರಸ್ತಾವಿಸಿದರು.
Click this button or press Ctrl+G to toggle between Kannada and English