ಬೆಂಗಳೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಶಾಸಕರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದ ಸ್ಪೀಕರ್ ರಮೇಶ್ ಕುಮಾರ್ ಕಚೇರಿಯಲ್ಲಿ ತಮ್ಮ ಬೆಂಬಲಿಗರ ಜತೆಗೂಡಿ ಸರಿಯಾಗಿ 3.30ಕ್ಕೆ ಪ್ರಮಾಣ ವಚನ ಸ್ವೀಕರಿಸಿದರು. ಭಗವಂತ ಹಾಗೂ ಸತ್ಯ ನಿಷ್ಠೆ ಹೆಸರಲ್ಲಿ ಅನಿತಾ ಕುಮಾರಸ್ವಾಮಿ ರಾಮನಗರ ಶಾಸಕರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ರಮೇಶ್ ಕುಮಾರ್ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅನಿತಾ ಕುಮಾರಸ್ವಾಮಿ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಒಂದು ವೇಳೆ ಸಚಿವ ಸ್ಥಾನ ನೀಡಿದರೆ ಪ್ರಮಾಣಿಕವಾಗಿ ನಿರ್ವಹಿಸುತ್ತೇನೆ. ಆದರೆ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಮನಗರಕ್ಕೆ ನಾನೇ ಮೊದಲ ಮಹಿಳಾ ಶಾಸಕಿ. ನನ್ನ ಪತಿ ಸಿಎಂ ಆಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡುತ್ತೇನೆ. ರಾಮನಗರ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಅವರಿಗೆ ನಾನು ಋಣಿಯಾಗಿರುತ್ತೇನೆ ಎಂದರು.
ಈ ವೇಳೆ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕ ಗೋಪಾಲಯ್ಯ, ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಸೇರಿದಂತೆ ರಾಮನಗರದ ಜೆಡಿಎಸ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English