ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾಗೆ ಕಂಕಣ ಭಾಗ್ಯ ಕೂಡಿಬಂದಿದೆ. ತಮ್ಮ ಬಾಲ್ಯದ ಸ್ನೇಹಿತೆಯೊಂದಿಗೆ ಹಸೆಮಣೆ ಏರಲು ಸರ್ಜಾ ರೆಡಿಯಾಗಿದ್ದಾರೆ.
ತಮ್ಮ ಬಾಲ್ಯದ ಗೆಳತಿ ಪ್ರೇರಣಾ ಅವರೊಂದಿಗೆ ಧ್ರುವಾ ಸರ್ಜಾ ಡಿಸೆಂಬರ್ 10ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಹಿಂದೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ತಾವು ಲವ್ ಮ್ಯಾರೇಜ್ ಆಗುವುದಾಗಿ ಸುಳಿವು ಬಿಟ್ಟುಕೊಟ್ಟಿದ್ದರು. ಅದರಂತೆ ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಸ್ನೇಹಿತೆ ಪ್ರೇರಣಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ.
ಸದ್ಯದಲ್ಲೇ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಮದುವೆಗೆ ಸಿದ್ಧತೆ ನಡೆಯುತ್ತಿರುವುದಂತು ಖಚಿತ.
Click this button or press Ctrl+G to toggle between Kannada and English