ದ.ಕ.ದಲ್ಲಿ ಮಂಗಳವಾರ ಮೀಲಾದ್​​ ರಜೆ: ಯು.ಟಿ.ಖಾದರ್

10:47 AM, Monday, November 19th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-khaderಮಂಗಳೂರು: ದ.ಕ. ಜಿಲ್ಲೆಯಲ್ಲಿ ಪ್ರವಾದಿ ಮುಹಮ್ಮದ್ ಅವರ‌ ಜನ್ಮ ದಿನ ಮೀಲಾದುನ್ನಬಿ ಆಚರಣೆ ನವೆಂಬರ್ 20ರಂದು ನಡೆಯಲಿರುವುದರಿಂದ ಅಂದು ದ.ಕ. ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಮೀಲಾದ್ ಸರ್ಕಾರಿ ರಜೆ ನ. 21 ರಂದು ನಿಗದಿಯಾಗಿದ್ದರೂ ದ.ಕ. ಜಿಲ್ಲೆಯಲ್ಲಿ ಮೀಲಾದ್ 20ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ. 21ರ ಸರ್ಕಾರಿ ರಜೆಯನ್ನು ಬದಲಾಯಿಸಿ ನ. 20 ರಂದು ಶಾಲಾ-ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ರಜಾ ದಿನವನ್ನಾಗಿ ಪರಿಗಣಿಸಲು ಹಾಗೂ ನ. 21 ರಂದು ಎಂದಿನಂತೆ ಕಾರ್ಯನಿರ್ವಹಿಸಲು ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

ಈ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಸೋಮವಾರ ಈ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English