ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಿನ್ನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಸುಮಾರು ಹದಿನಾರು ವರ್ಷಗಳ ಕಾಲ ಓರ್ವ ಹೆಣ್ಣು ಮಗಳಾಗಿ ದೇಶದ ಚುಕ್ಕಾಣಿ ಹಿಡಿದು, ಉಕ್ಕಿನ ಮಹಿಳೆ ಎಂದು ಹೆಸರಾದವರು ಇಂದಿರಾ ಗಾಂಧಿ ಎಂದು ಬಣ್ಣಿಸಿದರು.
ಸ್ವಾತಂತ್ರ್ಯ ಸಿಕ್ಕರೂ ದೇಶಕ್ಕೆ ಸಾಮಾಜಿಕ ಸ್ವಾತಂತ್ರ್ಯ ಬಂದಿರಲಿಲ್ಲ. ಇಂದಿರಾ ಗಾಂಧಿಯವರು ಅಧಿಕಾರಕ್ಕೆ ಬಂದು ಕಠಿಣವಾದ ನಿಲುವುಗಳ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ವರ್ಗದವರಿಗೆ ಸ್ವಾಭಿಮಾನದಿಂದ ಬದುಕುವಂತೆ ಮಾಡಿದ್ದರು.
Click this button or press Ctrl+G to toggle between Kannada and English