- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೆಳ್ತಂಗಡಿಯಲ್ಲಿ ಮಧ್ಯರಾತ್ರಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

attacked [1]ಬೆಳ್ತಂಗಡಿ: ಮಧ್ಯರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಗುಳಿಗಕಟ್ಟೆ ಮುಂದೆ ನಡೆದಿದೆ.

ಗದಗ ಜಿಲ್ಲೆಯ ಸುರೇಶ್ (27) ಹಲ್ಲೆಗೊಳಗಾದ ವ್ಯಕ್ತಿ. ಇವರು ಉಜಿರೆಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು. ಇವರ ಕೈ ಕಾಲಿಗೆ ಗಂಭೀರ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಗೆ ಕಾರಣ ಏನು ಮತ್ತು ಹಲ್ಲೆ ಮಾಡಿದವರು ಯಾರು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.