ಪಣಜಿ: ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್, ಹಾಸ್ಪಿಟಲ್ ಸೇರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಹುದ್ದೆ ತೊರೆಯಲು ನಿರ್ಧರಿಸಿದ್ದರು ಎಂದು ಗೋವಾ ಕೃಷಿ ಸಚಿವ ವಿಜಯ್ ಸರ್ದೇಸಾಯಿ ಹೇಳಿದ್ದಾರೆ.
ಆಸ್ಪತ್ರೆಗೆ ದಾಖಲಾಗುವ ವೇಳೆ ಪರಿಕ್ಕರ್ ಸಿಎಂ ಹುದ್ದೆ ಜೊತೆಗೆ ತಮ್ಮಲ್ಲಿರುವ ಎಲ್ಲ ಅಧಿಕಾರವನ್ನೂ ಹಸ್ತಾಂತರ ಮಾಡಲು ಇಚ್ಛಿಸಿದ್ದರು. ಆದರೆ ಬಳಿಕ ಹಲವಾರು ಘಟನೆಗಳು ಸಂಭವಿಸಿದವು. ಬಿಜೆಪಿ ಹೈಕಮಾಂಡ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಹುದ್ದೆ ತೊರೆಯದಂತೆ ಪರಿಕ್ಕರ್ಗೆ ಆದೇಶಿಸಿತ್ತು ಎಂದು ಸರ್ದೇಸಾಯಿ ಹೇಳಿದ್ದಾರೆ.
ಮನೋಹರ್ ಪರಿಕ್ಕರ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ಸರ್ಕಾರ ರಚನೆಗೆ ಸಾಕಷ್ಟು ಕಸರತ್ತು ನಡೆಸಿತ್ತು. ಈ ನಿಟ್ಟಿನಲ್ಲಿ ರಾಜ್ಯಪಾಲರನ್ನು ಬೇಟಿಯಾಗಿ ಅಹವಾಲು ಸಲ್ಲಿಸಿತ್ತು. ಪರಿಕ್ಕರ್ ಪದತ್ಯಾಗಕ್ಕೂ ಕಾಂಗ್ರೆಸ್ ಪಟ್ಟು ಹಿಡಿದಿತ್ತು.
62 ವರ್ಷದ ಪರಿಕ್ಕರ್ ಅಕ್ಟೋಬರ್ 14ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಸದ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪರಿಕ್ಕರ್ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ಗೆ ಏಮ್ಸ್ನಲ್ಲಿ ಚಿಕಿತ್ಸೆ ಪಡೆದಿದ್ದರು.
Click this button or press Ctrl+G to toggle between Kannada and English