ಸೋಮವಾರ ಮಧ್ಯಾಹ್ನ 1.30ಕ್ಕೆ ಈದ್ಗಾ ಖುದ್ದೂಸ್‌ನಲ್ಲಿ ಜಾಫರ್ ಷರೀಫ್ ಅಂತ್ಯಕ್ರಿಯೆ

8:15 PM, Sunday, November 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

Jaffer Shariefಬೆಂಗಳೂರು : ಕೇಂದ್ರದ ಮಾಜಿ ಸಚಿವ , ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ. ಜಾಫರ್ ಷರೀಫ್(85) ನಿಧನ ಹೊಂದಿದ್ದಾರೆ, ದೇಶಕ್ಕೆ ಬ್ರಾಡ್ ಗೇಜ್ ರೈಲು ಪರಿಚಯಿಸಿದ ದೂರದೃಷ್ಟಿ ರಾಜಕಾರಣಿಯಾಗಿದ್ದರು.

ಜಾಫರ್ ಷರೀಫ್ 1933ರ ನವೆಂಬರ್ 3 ರಂದು ಚಿತ್ರದುರ್ಗ ಚಳ್ಳಕೆರೆಯಲ್ಲಿ ಹುಟ್ಟಿದ್ದರು, 1991ರಿಂದ 1995ರವರೆಗೆ ಪಿವಿ ನರಸಿಂಹ ರಾವ್ ಸಂಪುಟದಲ್ಲಿ ಕೇಂದ್ರ ರೈಲ್ವೆ ಸಚಿವರಾಗಿದ್ದರು.

1972ರಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಬ್ರಾಡ್ ಗೇಡಜ ರೈಲನ್ನು ದೇಶಕ್ಕೆ ಪರಿಚಯಿಸಿದ ರಾಜಕಾರಣಿಯಾಗಿದ್ದರು. ಕಳೆದ ಒಂದು ವಾರದಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾಫರ್ ಷರೀಫ್ ಅವರು ಉರ್ದುವಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಅಜಾದ್ ನೆನಪಿನಾರ್ಥ ಇಂಡಿಯಾ ವಿನ್ಸ್ ಫ್ರೀಡಂ ಎಂಬ ಪುಸ್ತಕವನ್ನು ಬರೆದಿದ್ದು ಇದೇ ತಿಂಗಳ 28ರಂದು ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು.

ಜಾಫರ್ ಷರೀಫ್ ರೈಲ್ವೆ ಸಚಿವರಾಗಿದ್ದಾಗ ಕರ್ನಾಟಕದ ರೈಲ್ವೆಗೆ ಸಾಕಷ್ಟು ಅನುದಾನ ನೀಡಿದ್ದರು. ಇನ್ನು ಮೈಸೂರು ಮತ್ತು ಬೆಂಗಳೂರು ನಡುವೆ ಚಾಮುಂಡಿ ಎಕ್ಸ್ ಪ್ರೆಸ್ ಮತ್ತು ಟಿಪ್ಪು ಎಕ್ಸ್ ಪ್ರೆಸ್ ರೈಲು ಸಂಚರಿಸಲು ಸಾಕಷ್ಟು ಕೆಲಸ ಮಾಡಿದ್ದರು.

ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವರಾದ ಜಾಫರ್ ಷರೀಫ್ ಅವರಿಗೆ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು.

ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಚಿವ ಆರ್‌ವಿ ದೇಶಪಾಂಡೆ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಾಫರ್ ಷರೀಫ್ ಅಂತ್ಯಕ್ರಿಯೆಯ ಸೋಮವಾರ ಮಧ್ಯಾಹ್ನ 1.30ಕ್ಕೆ ಈದ್ಗಾ ಖುದ್ದೂಸ್‌ನಲ್ಲಿ ನಡೆಯಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English