ಹುಬ್ಬಳ್ಳಿ: ಕುಖ್ಯಾತ ಅಂತರಾಜ್ಯ ದರೋಡರಕೋರ ದಂಪತಿ ಹಾಗೂ ಓರ್ವ ಸಹಚರನಿಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.
ಹುಬ್ಬಳ್ಳಿಯ ಐದನೇ ಅಧಿಕ ಜಿಲ್ಲಾ ಸತ್ರ ನ್ಯಾಯಲಯದ ನ್ಯಾಯಧೀಶ ಗಂಗಣ್ಣವರ್ ನಾಗರಾಜ್ ಬಳಿಗಾರ 8 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿದ್ರೆ, ಆತನ ಪತ್ನಿ ಲಕ್ಷ್ಮೀ ಬಳಿಗಾರಗೆ 5 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ಇವರ ಸಹಚರ ಮಾರುತಿಗೆ 3 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಆರೋಪಿಗಳು ಮನೆಗಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.ಇವರನ್ನು ಬಂಧಿಸಿದ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಜಗದೀಶ ಹಂಚಿನಾಳ ಹಾಗೂ ಅವರ ತಂಡ ಆರೋಪಿಗಳ ವಿರುದ್ದ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣವನ್ನು ಕೂಲಂಕುಶವಾಗಿ ವಿಚಾರಣೆ ನಡೆಸಿದ ನ್ಯಾಯಾಯ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಶಿಕ್ಷೆಗೊಳಗಾಗಿರುವ ನಾಗರಾಜ್ ಬಳಿಗಾರ ಉಡುಪಿಯ ವಿನೋದ ಶೆಟ್ಟಿಗಾರ ಕೊಲೆ ಪ್ರಕರಣ ಪ್ರಮುಖ ಆರೋಪಿಯಾಗಿದ್ದಾನೆ. ಈ ಪ್ರಕಣದ ತನಿಖೆ ನಡೆಸಿದ ಅಶೋಕ ನಗರ ಪೊಲೀಸ್ ಸಿಬ್ಬಂದಿಗೆ ಹು-ಧಾ ಪೊಲೀಸ್ ಆಯುಕ್ತ ಎಂ.ಎನ್ ನಾಗರಾಜ್ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.
Click this button or press Ctrl+G to toggle between Kannada and English