ಮಂಗಳೂರು: ನಗರದ ಕದ್ರಿ ಪಾರ್ಕ್ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ.
ಕಾಸರಗೋಡಿನ ಹರ್ಷಿತ್ ಕುಮಾರ್ ಹಾಗೂ ಆತನ ಪ್ರಿಯತಮೆ ಆತ್ಮಹತ್ಯೆಗೆ ಯತ್ನಿಸಿದವರು. ಇಂದು ಸಂಜೆ ಕದ್ರಿ ಪಾರ್ಕ್ಗೆ ಬಂದ ಪ್ರೇಮಿಗಳಿಬ್ಬರು, ಸ್ವಲ್ಪ ಹೊತ್ತು ಪಾರ್ಕ್ನಲ್ಲಿ ಸುತ್ತಾಡಿ ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Click this button or press Ctrl+G to toggle between Kannada and English