ಹಾಸನದ ಜೆಡಿಎಸ್ ಮಾಜಿ ಶಾಸಕ ಎಚ್‌ಎಸ್ ಪ್ರಕಾಶ್ ನಿಧನ

1:17 PM, Tuesday, November 27th, 2018
Share
1 Star2 Stars3 Stars4 Stars5 Stars
(No Ratings Yet)
Loading...

prakashಹಾಸನ: ಹಾಸನ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಎಚ್‌.ಎಸ್. ಪ್ರಕಾಶ್(67) ಮಂಗಳವಾರ ಹೃದಯಾಘಾತದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ.

ಮೃತರು, ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ, 67 ವರ್ಷದ ಎಚ್‌ಎಸ್ ಪ್ರಕಾಶ್ ಅವರ ಪೂರ್ಣ ಹೆಸರು ಹಾಸನ ಸಣ್ಣಯ್ಯ ಪ್ರಕಾಶ್, 1994ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಪ್ರಕಾಶ್ 1999ರಲ್ಲಿ ಸೋಲು ಅನುಭವಿಸಿದ್ದರು.

ನಂತರ 2004,2008,2013ರಲ್ಲಿ ಸತತ ಹ್ಯಾಟ್ರಿಕ್ ಬಾರಿಸಿದ್ದ ಪ್ರಕಾಶ್, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರೀತಂ ಗೌಡ ವಿರುದ್ಧ ಸೋಲು ಅನುಭವಿಸಿದ್ದರು.

ಆರಂಭದಿಂದಲೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಬೆಂಬಲಿಗರಾಗಿದ್ದ ಪ್ರಕಾಶ್, 1983-89ರವರೆಗೆ ಹಾಸನ ನಗರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಹಾಸನದ ಸಂಜೀವಿನಿ ಕೋ-ಆಪರೇಟಿವ್ ಹಾಸ್ಪಿಟಲ್ ಅಧ್ಯಕ್ಷರಾಗಿದ್ದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಹೆಸರು ಮಾಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English