ಮಂಡ್ಯದಲ್ಲಿ ‘ಅಂಬಿ ನಿಂಗೆ ವಯಸ್ಸಾಯ್ತೋ’ ಮರು ರಿಲೀಸ್​..!

1:46 PM, Tuesday, November 27th, 2018
Share
1 Star2 Stars3 Stars4 Stars5 Stars
(No Ratings Yet)
Loading...

ambarishಮಂಡ್ಯ: ಸೋಮವಾರ ಮಂಡ್ಯದ ಗಂಡು ಪಂಚಭೂತಗಳಲ್ಲಿ ಲೀನರಾದರು. ಅವರ ಅಗಲಿಕೆಯಿಂದ ಸ್ಯಾಂಡಲ್ವುಡ್ ಮಾತ್ರವಲ್ಲದೆ ಸಕ್ಕರೆ ನಾಡಿಗೂ ಸಹ ಅನಾಥ ಪ್ರಜ್ಞೆ ಕಾಡುತ್ತಿದೆ. ಈ ನಡುವೆ ಕರುನಾಡ ಕರ್ಣ ಅಂಬಿಯನ್ನು ಮತ್ತೆ ಇಂದು ತೆರೆಮೇಲೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು.

ಹೌದು, ಅಂಬರೀಶ್ ಅಭಿಮಾನಿಗಳ ಒತ್ತಾಯದ ಮೇರೆಗೆ ಮಂಡ್ಯದಲ್ಲಿ ‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರವನ್ನು ಮರು ರಿಲೀಸ್ ಮಾಡಲು ನಿರ್ಧರಿಸಲಾಗಿದೆ.

ಮಂಡ್ಯದ ಸಂಜಯ್ ಚಿತ್ರಮಂದಿರದಲ್ಲಿ ಇಂದಿನಿಂದ ಚಿತ್ರವನ್ನು ಮರು ರಿಲೀಸ್ ಮಾಡಲು ನಿರ್ಮಾಪಕ ಜಾಕ್ ಮಂಜು ನಿರ್ಧರಿಸಿದ್ದಾರೆ. ಅಲ್ಲದೆ ಇದರಿಂದ ಬರುವ ಹಣವನ್ನು ಚಾರಿಟಿಗೆ ನೀಡುವಂತೆ ನಿರ್ಮಾಪಕರು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English