ಟಿಆರ್​ಎಸ್​ ಹಾಗೂ ಕಾಂಗ್ರೆಸ್​ ಫ್ರೆಂಡ್ಲಿ ಮ್ಯಾಚ್​ ಆಡುತ್ತಿವೆ: ನರೇಂದ್ರ ಮೋದಿ

4:27 PM, Tuesday, November 27th, 2018
Share
1 Star2 Stars3 Stars4 Stars5 Stars
(No Ratings Yet)
Loading...

narendra-modiನಿಜಾಮಾಬಾದ್: ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಹಾಗೂ ಕಾಂಗ್ರೆಸ್ ಫ್ರೆಂಡ್ಲಿ ಮ್ಯಾಚ್ ಆಡುತ್ತಿವೆ. ಎರಡೂ ಪಕ್ಷಗಳು ಕುಟುಂಬ ಆಳ್ವಿಕೆಯಲ್ಲಿವೆ. ಹಾಗಾಗಿ ಅವು ಅಭಿವೃದ್ಧಿಗೆ ಪೂರಕವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ನಿಜಾಮಾಬಾದ್ನಲ್ಲಿ ನಡೆದ ಬಿಜೆಪಿ ಚುನಾವಣಾ ರಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಟಿಆರ್ಎಸ್ ಒಂದೇ ನಾಣ್ಯದ ಎರಡು ಮುಖಗಳಿಂದ್ದಂತೆ. ಎರಡೂ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿವೆ. ಅವೆರಡರ ಸಿದ್ಧಾಂತಗಳಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ ಎಂದು ಪ್ರಧಾನಿ ಕುಟುಕಿದರು.

ಇಲ್ಲಿನ ಮುಖ್ಯಮಂತ್ರಿ ನಿಜಾಮಾಬಾದ್ಅನ್ನು ಲಂಡನ್ನಂತೆ ಮಾಡುತ್ತೇವೆ ಎಂದು ಹೇಳುತ್ತಾರೆ ಇಲ್ಲಿನ ಪರಿಸ್ಥಿತಿ ನೋಡಿದರೆ ಬಹಳಷ್ಟು ಅಭಿವೃದ್ಧಿಯಾಗಬೇಕಿದೆ. ತೆಲಂಗಾಣದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೊಂದರೆ ಇದೆ. ನಾವು ಅಧಿಕಾರಕ್ಕೆ ಬಂದಾಗ ಕುಡಿಯುವ ನೀರು ಸೌಲಭ್ಯ ಕೊಡದಿದ್ದರೆ ಮತ್ತೆ ಮತ ನೀಡಿ ಎಂದು ನಿಮ್ಮಲ್ಲಿಗೆ ನಾನು ಬರುವುದಿಲ್ಲ ಎಂದು ಪ್ರಧಾನಿ ಹೇಳಿದರು.

ರಾಜ್ಯದಲ್ಲಿ ಇನ್ನೂ ಜನ ಕಟ್ಟಿಗೆ ಒಲೆಗಳಲ್ಲಿ ಅಡುಗೆ ಮಾಡುತ್ತಿದ್ದಾರೆ. ಇದರ ಹೊಗೆ 400 ಸಿಗರೇಟ್ಗಳಿಗೆ ಸಮ, ಉಜ್ವಲ ಯೋಜನೆಯಡಿ ಬಡ ಜನರಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡಲಾಗುತ್ತಿದೆ. ಈಗಾಗಲೇ ರಾಜ್ಯದ 5 ಲಕ್ಷ ಮಂದಿಗೆ ಈ ಸೌಲಭ್ಯ ಸಿಕ್ಕಿದೆ ಎಂದರು.

ನಾವು ವೋಟ್ ಬ್ಯಾಂಕ್ ರಾಜಕಾರಣವನ್ನು ನಂಬುವುದಿಲ್ಲ. ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಎಲ್ಲರ ಜತೆ ಎಲ್ಲರ ಅಭಿವೃದ್ಧಿ) ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದೇವೆ. ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬಂದು ಎರಡು ತಿಂಗಳಾಗಿದೆ ಈಗಾಗಲೇ ಮೂರು ಲಕ್ಷ ಜನ ಇದರ ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English