ಮಂಗಳೂರು: ಮದುವೆ ಮಾಡಿಸುವ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಜಿಲ್ಲೆಯ ಕಡೂರು ಪೋಲಿಸರು ಬಂಧಿಸಿದ್ದಾರೆ.
ಮಂಡ್ಯ ಮೂಲದ ರಾಮಕೃಷ್ಣ (52) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಬಂಧಿಸಲು ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಈ ಖತರ್ನಾಕ್ ಆಸಾಮಿ ಎರಡನೇ ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ಸದ್ಯ ಪೊಲೀಸರ ಆಥಿತಿಯಾಗಿರುವ ರಾಮಕೃಷ್ಣನಿಗೆ ಹೆಚ್ಚು ಟಾರ್ಗೆಟ್ ಆಗಿರುವವರು ಸರ್ಕಾರಿ ನೌಕರಿಯ ಮಹಿಳೆಯರು. ಈತ ಚಿಕ್ಕಮಗಳೂರು ಮೂಲದ ಶಿಕ್ಷಕಿಗೆ ಮೋಸ ಮಾಡಿ ನಂತರ ಸಿಕ್ಕಿಬಿದ್ದಿದ್ದಾನೆ. ಈ ಹಿಂದೆ ಇದೇ ರೀತಿ ಮೋಸ ಮಾಡಿದ ಬಗ್ಗೆ ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬಾಗಲಕೋಟೆ, ಚಾಮರಾಜನಗರ, ಬೆಂಗಳೂರು ನಗರ ಠಾಣೆಗಳಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿತ್ತು.
ಈತ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಷ್ಟೆ ಅಲ್ಲದೆ ಹಣ ಮತ್ತು ಬಂಗಾರ ದೋಚಿಕೊಂಡು ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಆರೋಪಿ ರಾಮಕೃಷ್ಣನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English