ಮಂಗಳೂರು: ಡ್ರೆಜ್ಜಿಂಗ್ ಮಷಿನ್ ಬಳಸಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು, ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಮಂಗಳೂರಿನ ತೆಂಕುಳಿಪಾಡಿ ಗ್ರಾಮದ ಮಳಲಿ ಸಾದೂರಿನಲ್ಲಿ ಫಲ್ಗುಣಿ ನದಿಯಲ್ಲಿ ಡ್ರೆಜ್ಜಿಂಗ್ ಮಷಿನ್ ಬಳಸಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಳಿಕ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರನ್ನು ಕಂಡು ಮರಳುಗಾರಿಕೆ ಮಾಡುತ್ತಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಮರಳನ್ನು ತೆಗೆಯುತ್ತಿದ್ದ ಡ್ರೆಜ್ಜಿಂಗ್ ಮಷಿನ್ ಮತ್ತು ದೋಣಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಮುಂದಿನ ತನಿಖೆಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.
Click this button or press Ctrl+G to toggle between Kannada and English