ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶದ ಮೇಲೆ ಶುಕ್ರವಾರ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು 25 ಲೋಡು ಮರಳು ಮತ್ತು ಮರಳುಗಾರಿಕೆಗೆ ಬಳಸಿದ 17 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಅಡ್ಯಾರ್ ಗ್ರಾಮದ ಸಹ್ಯಾದ್ರಿ ಕಾಲೇಜಿನ ಹಿಂದುಗಡೆ ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿತ್ತು. ಮರಳುಗಾರಿಕೆ ನಡೆಸುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದು, ಸರಿಸುಮಾರು 18 ಲಕ್ಷ ರೂ. ಮೌಲ್ಯದ ಸೊತ್ತನ್ನು ಪೊಲೀಸರು ಶಪಡಿಸಿಕೊಂಡಿದ್ದಾರೆ.
ದಾಸ್ತಾನು ಮಾಡಿದ 25 ಲೋಡು ಮರಳು ಹಾಗೂ 17 ದೋಣಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ.
Click this button or press Ctrl+G to toggle between Kannada and English