ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಉಪ್ಪಿನಂಗಡಿ ಬಳಿಯ ಬೆದ್ರೋಡಿ ಎಂಬಲ್ಲಿ ನಿನ್ನೆ ತಡ ರಾತ್ರಿ 1:50 ಕ್ಕೆ ಗ್ಯಾಸ್ ಟ್ಯಾಂಕರೊಂದು ಮಗುಚಿ ಬಿದ್ದ ಪರಿಣಾಮ ಅನಿಲ ಸೋರಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಬೆಂಕಿ ಉರಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಭಾರತ್ ಪೆಟ್ರೋಲಿಯಂ ಕಂಪೆನಿಯ ಅನಿಲ ಟ್ಯಾಂಕರ್ ತೆರಳುತ್ತಿತ್ತು. ಈ ವೇಳೆ ಬೆದ್ರೋಡಿಯ ತೂಗು ಸೇತುವೆ ಬಳಿಯ ತಿರುವಿನಲ್ಲಿ ಮಗುಚಿ ಬಿದ್ದಿದೆ. ಪರಿಣಾಮ ಅನಿಲ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸರದ ನಿವಾಸಿಗಳನ್ನು ಸುರಕ್ಷಿತಾ ಸ್ಥಳಗಳಿಗೆ ತೆರಳುವಂತೆ ಕ್ರಮಕೈಗೊಳ್ಳಲಾಗಿದೆ.
ಮಗುಚಿ ಬಿದ್ದ ಟ್ಯಾಂಕರ್ನಿಂದ ಅನಿಲ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಅಂತಿಮ ಹಂತದಲ್ಲಿದೆ. ಅದೃಷ್ಟವಶಾತ್ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುರಕ್ಷಿತಾ ಕ್ರಮದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿ ಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
Click this button or press Ctrl+G to toggle between Kannada and English