ನವದೆಹಲಿ: ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಐಎಸ್ಬಿ ಹೈದಾರಾಬಾದ್ ಪ್ರೊಫೆಸರ್ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಅರವಿಂದ್ ಸುಬ್ರಮಣಿಯನ್ ಅವರ ತೆರವಾದ ಸ್ಥಾನಕ್ಕೆ ಕೃಷ್ಣಮೂರ್ತಿ ಅವರನ್ನ ನೇಮಕ ಮಾಡಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅರವಿಂದ್ ಸುಬ್ರಮಣಿಯನ್ ಇದೇ ವರ್ಷದ ಆರಂಭದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಮೂರು ವರ್ಷಗಳ ಕಾಲ ಆ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಕ್ಯಾಬಿನೆಟ್ನ ನೇಮಕ ಸಮಿತಿ ಕೃಷ್ಣಮೂರ್ತಿ ಅವರ ಆಯ್ಕೆಯನ್ನ ಅನುಮೋದಿಸಿದೆ ಎಂದು ಕೇಂದ್ರ ಸರ್ಕಾರದ ನೋಟಿಫಿಕೇಷನ್ನಲ್ಲಿ ಹೇಳಲಾಗಿದೆ.
ಸುಬ್ರಮಣಿಯನ್ ಚಿಕಾಗೋ ವಿವಿಯಲ್ಲಿ ಪದವಿ ಮತ್ತು ಪಿಎಚ್ಡಿಯನ್ನ ಪಡೆದಿದ್ದಾರೆ. ಐಐಟಿ ಹಾಗೂ ಐಐಎಂ ಅಲ್ಯುಮಿನಿ ಆಗಿರುವ ಕೃಷ್ಣಮೂರ್ತಿ ಆರ್ಥಿಕ ಕ್ಷೇತ್ರದಲ್ಲಿ ತಮ್ಮದೆ ಛಾಪು ಮೂಡಿಸಿದ್ದಾರೆ.
Click this button or press Ctrl+G to toggle between Kannada and English