ಮಂಗಳೂರು ಏರ್​ಪೋರ್ಟ್​ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

10:00 AM, Tuesday, December 11th, 2018
Share
1 Star2 Stars3 Stars4 Stars5 Stars
(No Ratings Yet)
Loading...

protestಮಂಗಳೂರು: ಕೇಂದ್ರ ಸರ್ಕಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು‌ ಖಾಸಗೀಕರಣ ಮಾಡಲು ಹೊರಟಿರುವುದನ್ನು ವಿರೋಧಿಸಿ ವಿಮಾನ ನಿಲ್ದಾಣದ ಕಾರ್ಮಿಕರ ಒಕ್ಕೂಟದಿಂದ ಇಂದಿನಿಂದ ಮೂರು ದಿನಗಳ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ.

ವಿಮಾನ ನಿಲ್ದಾಣ ಕಾರ್ಮಿಕಾಧಿಕಾರಿಗಳ ಒಕ್ಕೂಟಗಳ ಶಾಖಾ ಕಾರ್ಯದರ್ಶಿ ಶ್ರವಣ್ ಕುಮಾರ್ ಧರಣಿಯನ್ನು ಉದ್ಘಾಟಿಸಿದರು. ಈ ಸಂದರ್ಭ ಭೇಟಿ ನೀಡಿದ್ದ ಕಾಸರಗೋಡಿನ ಸಂಸದ ಪಿ.ಕರುಣಾಕರನ್ ಮಾತನಾಡಿ, ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ, ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವೆ ಎಂದು ಹೇಳಿದ್ರು.

ವಿಮಾನ ನಿಲ್ದಾಣ ಕಾರ್ಮಿಕಾಧಿಕಾರಿಗಳ ಒಕ್ಕೂಟಗಳ ಶಾಖಾ ಅಧ್ಯಕ್ಷ ಅರವಿಂದ ಗಾಂವ್ಕರ್ ಉಪಸ್ಥಿತರಿದ್ದರು. ಇನ್ನು ಈ ಬಗ್ಗೆ ವಿ.ವಿ. ರಾವ್ ಮಾತನಾಡಿ, ಪ್ರತಿಭಟನೆಯಿಂದ ಮಂಗಳೂರು ವಿಮಾನ ನಿಲ್ದಾಣದ ಯಾವುದೇ ಕಾರ್ಯಾಚರಣೆಗೆ ಸಮಸ್ಯೆಯಾಗಿಲ್ಲ. ಎಲ್ಲಾ ವಿಮಾನದ ಹಾರಾಟವು ಸುಸೂತ್ರವಾಗಿ ನಡೆಯುತ್ತಿದೆ ಎಂದು ಹೇಳಿದ್ರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English