ದೇರಳಕಟ್ಟೆಯಲ್ಲಿ ಡಿ.15ರಂದು ನಾಡು ನುಡಿ ವೈಭವದ ‘ರತ್ನೋತ್ಸವ’

11:38 AM, Thursday, December 13th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Ratnotsava 2018ಮಂಗಳೂರು  : ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ದೇರಳಕಟ್ಟೆಯ ಗ್ರೀನ್ ಗ್ರೌಂಡ್  ನಲ್ಲಿ ಕರಾವಳಿ ಕರ್ನಾಟಕದ ಸಾಹಿತ್ಯ -ಸಾಂಸ್ಕೃತಿಕ ಸಮ್ಮೇಳನ ನಾಡು ನುಡಿ ವೈಭವದ ರತ್ನೋತ್ಸವವು ಡಿಸೆಂಬರ್ 15ರಂದು ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ  ರವೀಂದ್ರ ಶೆಟ್ಟಿ ಉಳಿದೊಟ್ಟು ತಿಳಿಸಿದರು.

ಮಂಗಳೂರಿನ ಪ್ರತಿಕಾ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು ಡಿಸೆಂಬರ್ 15ರಂದು ಬೆಳಗ್ಗೆ 9ಕ್ಕೆ  ದೇರಳಕಟ್ಟೆ ಬೆಳ್ಮ ಪಂಚಾಯತ್ ವಠಾರದಿಂದ ಸಮ್ಮೇಳನಾಧ್ಯಕ್ಷರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಸಾಂಸ್ಕೃತಿಕ ದಿಬ್ಬಣದಲ್ಲಿ ವೇದಿಕೆಗೆ ಕರೆ ತರಲಾಗುವುದು. ವಿಜಯ ಕೃಷ್ಣಪ್ಪ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ರತ್ನ ಎಜ್ಯುಕೇಶನ್‌ನ ಟ್ರಸ್ಟಿ ರತ್ನಾವತಿ ಕೆ. ಶೆಟ್ಟಿ ಅವರು ಧ್ವಜಾರೋಹಣ ಮಾಡಲಿರುವರು.

ರತ್ನೋತ್ಸವ 2018 ನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಲಿದ್ದಾರೆ . ಬೆಳಗ್ಗಿನಿಂದ ಸಂಜೆಯವರೆಗೆ  ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಸೌಮ್ಯ ಆರ್. ಶೆಟ್ಟಿ, ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ, ಶಾಲಾ ಮುಖ್ಯೋಪಧ್ಯಾಯರಾದ ನಹೀಮ್ ಹಮೀದ್, ಸಂಸ್ಥೆಯ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ್ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English