ಕಮಲ್​ನಾಥ್​ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆ: ಅಧಿಕೃತ ಪ್ರಕಟಣೆ ಅಷ್ಟೇ ಬಾಕಿ..!

1:17 PM, Thursday, December 13th, 2018
Share
1 Star2 Stars3 Stars4 Stars5 Stars
(No Ratings Yet)
Loading...

kamalnathನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಗೆಲುವು ದಾಖಲಿಸಿರುವ ಕಾಂಗ್ರೆಸ್ ಈಗ ಮುಖ್ಯಮಂತ್ರಿಗಳ ಅಂತಿಮ ಆಯ್ಕೆ ಪ್ರಕಟಿಸಲಿದೆ. ಮಧ್ಯಪ್ರದೇಶದಲ್ಲಿ ಈಗಾಗಲೇ ಕಮಲ್ನಾಥ್ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸಿವೆ.

ಮೂಲಗಳ ಪ್ರಕಾರ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ನಾಥ್ ಅವರನ್ನು ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ಗುರುವಾರ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.

ಮಾಜಿ ಸಿಎಂ ದಿಗ್ವಿಜಯ್ ಸಿಂಗ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ವಿವೇಕ್ ಟಂಖಾ ಅವರು ಈಗಾಗಲೇ ಗವರ್ನರ್ ಆನಂದಿ ಬೇನ್ ಪಟೇಲ್ ಅವರನ್ನು ಭೇಟಿಯಾಗಿದ್ದು, ಸರ್ಕಾರ ರಚಿಸಲು ಅವಕಾಶ ನೀಡುವಂತೆ ಕೋರಿದ್ದಾರೆ.

ಛತ್ತೀಸ್ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಗೆಲುವು ದಾಖಲಿಸಿದ ನಂತರ ಕಾಂಗ್ರೆಸ್ ತನ್ನ ಹಳೆಯ ಸಂಪ್ರದಾಯದಂತೆ ವೀಕ್ಷಕರನ್ನು ಆಯಾ ರಾಜ್ಯಗಳಿಗೆ ಕಳುಹಿಸಿ ಅಲ್ಲಿನ ಶಾಸಕರೊಂದಿಗೆ ಸಭೆ ನಡೆಸುತ್ತಿದೆ.

ಎಐಸಿಸಿ ಮುಖ್ಯ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜೈಪುರದಲ್ಲಿ ಎಲ್ಲಾ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸುತ್ತಿದ್ದು ಅವರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ. ಮೂಲಗಳ ಪ್ರಕಾರ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ಮುಂದಿದ್ದು, ತಪ್ಪಿದ್ದಲ್ಲಿ ಈ ಅವಕಾಶ ಸಚಿನ್ ಪೈಲಟ್ ಪಾಲಾಗಲಿದೆ.

ಪೈಲಟ್ ಅವರು ಕಳೆದ ಐದು ವರ್ಷಗಳಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಪ್ರಬಲಗೊಳಿಸಲು ಹೋರಾಟಮಾಡಿಕೊಂಡುಬಂದಿದ್ದಾರೆ. ರಾಹುಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪೈಲಟ್ ಕಷ್ಟದ ಸಂದರ್ಭಗಳಲ್ಲಿ ಕಾಂಗ್ರೆಸ್ಗೆ ನೆರವಾಗಿದ್ದು, ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಗೆಹ್ಲೋಟ್ ಅಥವಾ ಪೈಲಟ್ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಆಯ್ಕೆ ಮಾಡುವುದೇ ಹೈಕಮಾಂಡ್ಗೆ ದೊಡ್ಡ ತಲೆನೋವಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English