ವಿಷ ಪ್ರಸಾದ ಪ್ರಕರಣ: ವಿಷ ಹಾಕಿದವನ ಕುರಿತು ಸಿಕ್ಕಿತು ಮಹತ್ವದ ಸುಳಿವು

12:59 PM, Monday, December 17th, 2018
Share
1 Star2 Stars3 Stars4 Stars5 Stars
(No Ratings Yet)
Loading...

poisonಚಾಮರಾಜನಗರ: ಇಲ್ಲಿನ ಮಾರಮ್ಮ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವೊಂದು ಲಭ್ಯವಾಗಿದೆ.

ಈ ದುರಂತದಲ್ಲಿ ಪ್ರಭಾವಿ ವ್ಯಕ್ತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಇದರ ಕಿಂಗ್ಪಿನ್ಗಾಗಿ ಶೋಧಕಾರ್ಯ ಆರಂಭವಾಗಿದೆ. ತಮಿಳುನಾಡು ಮೂಲದ ವ್ಯಕ್ತಿಗಾಗಿ ಪೊಲೀಸರು ಬೇಟೆ ಕಾರ್ಯ ಮುಂದುವರಿಸಿದ್ದಾರೆ. ಈ ನಿಟ್ಟಿನಲ್ಲಿ ತಡರಾತ್ರಿ ತಮಿಳುನಾಡಿನ ಧರ್ಮಪುರಿಗೆ ತೆರಳಿರುವ ರಾಜ್ಯ ಪೊಲೀಸರ ಒಂದು ತಂಡದಿಂದ ಗಡಿಯಂಚಿನ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಬಂಧಿತರನ್ನ ನಿರಂತರ ವಿಚಾರಣೆಗೆ ಒಳಪಡಿಸಿರುವ ತನಿಖಾಧಿಕಾರಿಗಳು, ಈ ಸಂಜೆವರೆಗೆ ಮತ್ತಷ್ಟು ಜನರನ್ನು ಹೆಡೆಮುರಿ ಕಟ್ಟುವ ಸಾಧ್ಯತೆ ಇದೆ. ಈಗಾಗಲೇ ಪ್ರಕರಣವನ್ನು ಶೀಘ್ರವಾಗಿ ಬೇಧಿಸಲು, ಏಳು ತಂಡಗಳಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English