ಪತ್ರಕರ್ತರ ಕ್ರೀಡಾಕೂಟ 2018

5:32 PM, Monday, December 17th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

press-3ಮಂಗಳೂರು: ಕ್ರೀಡೆ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ. ಒತ್ತಡದಿಂದ ಕಾರ್ಯನಿರ್ವಹಿಸುವ ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇ ಗೌಡ ಅಭಿಪ್ರಾಯ ಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ವತಿಯಿಂದ ಭಾನುವಾರ ನಗರದ ಪುಟ್ಭಾಲ್ ಮೈದಾನದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ತಪ್ಪು ಕಲ್ಪನೆಯಿದೆ. ಆದರೆ ನಿಜವಾಗಿಯೂ ಪರಿಸ್ಥಿತಿ ಹಾಗಿಲ್ಲ. ಶಾಂತಿ, ಸೌಹಾರ್ದತೆಗೆ ಮಾಧ್ಯಮ ಕೊಡುಗೆ ಅಪಾರ. ಪತ್ರಕರ್ತರ ಸಂಘ ಬ್ರಾಂಡ್ ಮಂಗಳೂರು ಪರಿಕಲ್ಪನೆಯಲ್ಲಿ ಹಮ್ಮಿಕೊಂಡ ಯೋಜನೆ ಪರಿಣಾಮಕಾರಿ. ಪೆÇಲೀಸ್ ಇಲಾಖೆಯಿಂದ ಪೂರ್ಣ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.

ಮನಪಾ ಆಯುಕ್ತ ಮೊಹಮ್ಮದ್ ನಝೀರ್, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ವಾರ್ತಾಧಿಕಾರಿ ಖಾದರ್ ಶಾ, ಪ್ರೆಸ್‍ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್ ಪಡು ಸ್ವಾಗತಿಸಿದರು. ಹರೀಶ್ ಮೋಟುಕಾನ ವಂದಿಸಿದರು. ಸಂಘದ ಉಪಾಧ್ಯಕ್ಷ ಶರತ್ ಶೆಟ್ಟಿ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು.

ವೈವಿಧ್ಯಮಯ ಸ್ಪರ್ಧೆ: ಪತ್ರಕರ್ತರಿಗೆ ಬಾಳೆ ಹಣ್ಣು ತಿನ್ನುವ ಸ್ಪರ್ಧೆ, ಐಸ್‍ಕ್ರೀಂ ತಿನ್ನುವ ಸ್ಪರ್ಧೆ, ಚಕ್ಕುಲಿ ತಿನ್ನುವ ಸ್ಪರ್ಧೆ, ಸ್ಲೋ ಬೈಕ್ ರೇಸ್, 100 ಮೀ.ಓಟ, ಸಂಗೀತ ಕುರ್ಚಿ, ಗೋಣಿ ಚೀಲ ಓಟ, ಮೂರು ಕಾಲಿನ ಓಟ, ಕ್ರಿಕೆಟ್ ಮೊದಲಾದ ಸ್ಪರ್ಧೆಗಳು ನಡೆದವು.

press

press-2

press-4

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English