ಸರ ಕಳವು ಪ್ರಕರಣ: ಓರ್ವ ಆರೋಪಿಯ ಬಂಧನ

10:18 AM, Friday, December 21st, 2018
Share
1 Star2 Stars3 Stars4 Stars5 Stars
(No Ratings Yet)
Loading...

arrestedಮಂಗಳೂರು: ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರಿನ ಪಡುಪೆರಾರ ಕತ್ತಲ್ಸಾರ್ನ ತಿಲಕ್ (27) ಬಂಧಿತ ಆರೋಪಿ. ಈತನಿಂದ ಒಟ್ಟು 40 ಸಾವಿರ ಮೌಲ್ಯದ 2 ಚಿನ್ನದ ಸರ, ಹೋಂಡ ಆಕ್ಟಿವಾ ದ್ವಿಚಕ್ರ ವಾಹನ, ರೂ.3700 ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಈತ ಡಿಸೆಂಬರ್ 11ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಪೆರಾರ ಗ್ರಾಮದ ಎರಮೆ ಎಂಬಲ್ಲಿ ಪುಪ್ಪಾ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಕುತ್ತಿಗೆಗೆ ಕೈ ಹಾಕಿ ಚಿನ್ನದ ಕರಿಮಣಿಸರವನ್ನು ಎಗರಿಸಿ ಪರಾರಿಯಾಗಿದ್ದ ಎನ್ನಲಾಗಿದೆ.

ಅಲ್ಲದೆ, ಡಿಸೆಂಬರ್ 17ರಂದು ಕೊಳಂಬೆ ಗ್ರಾಮದ ಹೊಯಿಗೆಪದವು ನಿವಾಸಿ ಅಕ್ಷತಾ ತನ್ನ ಸಹೋದರಿ ಅಶ್ವಿತರೊಂದಿಗೆ ತನ್ನ ಮನೆಯಿಂದ ಬಜಪೆ ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕೊಳಂಬೆ ಗ್ರಾಮದ ಸಮೀಪ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ. ಈ ಎರಡು ಪ್ರಕರಣದ ತನಿಖೆ ನಡೆಸಿದ ಬಜಪೆ ಪೊಲೀಸರು ಮೂಡುಪೆರಾರ ಗ್ರಾಮದ, ಬಲವಂಡಿ ದೇವಸ್ಥಾನ ರಸ್ತೆಯಲ್ಲಿ ತಿಲಕ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಿಲಕ್ನನ್ನು ವಿಚಾರಣೆ ನಡೆಸಿದಾಗ ಆತ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English