ರಾಜ್ಯ ಸರಕಾರದ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸಿ: ಜೆ. ಆರ್. ಲೋಬೊ

1:47 PM, Saturday, December 22nd, 2018
Share
1 Star2 Stars3 Stars4 Stars5 Stars
(No Ratings Yet)
Loading...

j-r-loboಮಂಗಳೂರು: ಕರ್ನಾಟಕ ಸರಕಾರವು ಹಿಂದುಳಿದ ವರ್ಗದ ಜನರಿಗೆ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ರೂಪಿಸಿದೆ. ಅದನ್ನು ಜನತೆಗೆ ತಲುಪಿಸುವಂತಹ ಕೆಲಸವು ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಪದಾಧಿಕಾರಿಗಳ ಮೂಲಕ ಆಗಬೇಕು ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ಜೆ. ಆರ್. ಲೋಬೊ ರವರು ತಾರೀಕು 21.12.2018 ರಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷರಾದ ಶ್ರೀ ರಮಾನಂದ ಪೂಜಾರಿ ಯವರಿಗೆ ಅಧಿಕರ ಹಸ್ತಾಂತರ ಹಾಗೂ ಇತರ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಲೋಕಸಭಾ ಚುನಾವಣೆ ಅತೀ ಶೀಘ್ರದಲ್ಲಿ ಬರಲಿರುವುದರಿಂದ, ಈ ಸಮಿತಿಗೆ ಹೆಚ್ಚಿನ ಜವಾಬ್ದಾರಿ ಇದೆ. ಯಾಕೆಂದರೆ ಹಿಂದುಳಿದ ವರ್ಗ ಕಾಂಗ್ರೆಸ್ ಪಕ್ಷದ ಶಕ್ತಿ. ಈ ಕೂಡಲೇ ಪದಾಧಿಕಾರಿಗಳು ಕಾರ್ಯಪ್ರವರ್ತರಾಗಿ ಪ್ರತೀ ವಾರ್ಡುಗಳಿಗೆ ಭೇಟಿ ನೀಡಿ ಹಿಂದುಳಿದ ವರ್ಗಗಳ ಜನರನ್ನು ಒಗ್ಗೂಡಿಸಿ ಕಾರ್ಯ ತಂತ್ರಗಳನ್ನು ರೂಪಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಮ್, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಗಣೇಶ್ ಪೂಜಾರಿ, ನಿಕಟಪೂರ್ವ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಜನಾರ್ಧನ ಸುವರ್ಣ ರವರು ಸಂದರ್ಭೋಚಿತವಾಗಿ ಮಾತನಾಡಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಪ್ರಕಾಶ್ ಸಾಲ್ಯಾನ್, ಪ್ರಕಾಶ್ ಅಳಪೆ, ಕವಿತಾ ವಾಸು, ಶೈಲಜಾ, ರತಿಕಲಾ, ಪಕ್ಷದ ಪದಾಧಿಕಾರಿಗಳಾದ ಟಿ.ಕೆ. ಸುಧೀರ್, ನೀರಜ್ ಪಾಲ್, ಸದಾಶಿವ ಅಮೀನ್, ಉಮೇಶ್ ದೇವಾಡಿಗ, ಭರತೇಶ್ ಅಮೀನ್, ಶೋಭಾ ಕೇಶವ, ನಾರಾಯಾಣ ಕೋಟ್ಯಾನ್, ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು. ನೂತನ ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಶ್ರೀ ರಮಾನಂದ ಪೂಜಾರಿ ಸ್ವಾಗತಿಸಿದರು. ಶ್ರೀಮತಿ ದೀಪ್ತಿ ಕಾರ್ಯಕ್ರಮ ರೂಪಿಸಿ, ಧನ್ಯವಾದವಿತ್ತರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English