ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಶಾಸಕರಾದರೂ ತಮ್ಮ ಪಕ್ಷ ತೊರೆದರೆ ಮಾತ್ರ ಅವರೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು ಮಾಜಿ ಸಚಿವ ರಮೇಶ್ ಕುಮಾರ್ ಅವರನ್ನು ಸಂಪರ್ಕಿಸಿಲ್ಲ, ಪಕ್ಷಕ್ಕೆ ಆಹ್ವಾನವನ್ನೂನೀಡಿಲ್ಲ, ಯಾವಾಗ ಅವರು ತಮ್ಮ ಪಕ್ಷಕ್ಕೆ ರಾಜೀನಾಮೆ ಕೊಡುತ್ತಾರೋ ಆಗ ಮಾತ್ರ ನಾವು ಮಾತನಾಡಿಸುತ್ತೇವೆ ಎಂದರು.
ರಮೇಶ್ ಜಾರಕಿಹೊಳಿ ನೋವಿನ ಮಾತುಗಳು ಕಾಂಗ್ರೆಸ್ ಆಂತರಿಕ ಭಾವನೆ. ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಇದರಿಂದಲೇ ಗೊತ್ತಾಗುತ್ತಿದೆ, ಸಚಿವ ಸ್ಥಾನ ನೀಡುವ ಕುರಿತು ಹಲವು ಶಾಸಕರ ಮೂಗಿಗೆ ತುಪ್ಪ ಸವರಿ ಈಗ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಾರೆ. ಈ ಸರ್ಕಾರದ ಮೇಲೆ ಕಾಂಗ್ರೆಸ್ ಶಾಸಕರಿಗೇ ವಿಶ್ವಾಸವಿಲ್ಲ, ಎಲ್ಲವನೂ ಬಿಜೆಪಿ ಅವಲೋಕಿಸುತ್ತಿದೆ. ಕಾದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದರು.
ನಾವು ಆಪರೇಷನ್ ಕಮಲ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಅವರ ಪಕ್ಷದ ಆಂತರಿಕ ಸಮಸ್ಯೆಗೆ ಬಿಜೆಪಿ ಕಡೆ ಬೆರಳು ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
Click this button or press Ctrl+G to toggle between Kannada and English