ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಡಾ ಸೂಲಗಿತ್ತಿ ನರಸಮ್ಮನವರು ಉಸಿರಾಟದ ತೊಂದರೆಯಿಂದ ಕಳೆದ 25 ದಿನಗಳ ಹಿಂದೆ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಬಿಜಿಎಸ್ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ವೈ ಆಗಮಿಸಿದ್ದು, ಸೂಲಗಿತ್ತಿ ನರಸಮ್ಮನವರ ಆರೋಗ್ಯ ವಿಚಾರಿಸಿದರು. ಇಂದು ನರಸಮ್ಮ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಆರಂಭ ಮಾಡಲಿದ್ದು, ಹೆಚ್ಚಿನ ಧನ ಸಹಾಯದ ಅಗತ್ಯವಿದ್ದರೆ ಸಹಾಯ ನೀಡುವುದಾಗಿ ಬಿಎಸ್ವೈ ತಿಳಿಸಿದ್ದಾರೆ.
ಸೂಲಗಿತ್ತಿ ನರಸಮ್ಮ, ಗ್ರಾಮೀಣ ಭಾಗದ ಗರ್ಭಿಣಿಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಾವಿರಾರು ಹೆರಿಗೆಗಳನ್ನು ಮಾಡಿಸಿದ್ದಾರೆ. ಇವರ ಈ ಸೇವೆ ಗುರುತಿಸಿ, ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ, ಪದ್ಮ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ನರಸಮ್ಮ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು, ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.
Click this button or press Ctrl+G to toggle between Kannada and English