ಬೆಂಗಳೂರು: ಉಸಿರಾಟದ ತೊಂದರೆ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಡಾ. ಸೂಲಗಿತ್ತಿ ನರಸಮ್ಮ ನಿಧನರಾಗಿದ್ದಾರೆ.
ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 98 ವರ್ಷದ ನರಸಮ್ಮ, ಇಂದು ಮಧ್ಯಾಹ್ನ 3 ಗಂಟೆಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಇಂದು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಸಾರ್ವಜನಿಕರಿಗೆ ಅಂತಿಮ ದರ್ಶನ ಅವಕಾಶ ಕಲ್ಪಿಸಲು ನಿರ್ಧಾರ ಮಾಡಲಾಗಿದ್ದು, ಸಿದ್ಧತೆ ನಡೆಯುತ್ತಿದೆ.
Click this button or press Ctrl+G to toggle between Kannada and English