ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಪಿ.ಆರ್. ರಮೇಶ್ ನೇಮಕ

3:51 PM, Wednesday, December 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

siddaramaihಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಅವರು ನೇಮಕಗೊಂಡಿದ್ದಾರೆ.

ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ರಮೇಶ್ ಅವರಿಗೆ ನೇಮಕ ಪತ್ರ ನೀಡಿದರು. 2017 ರ ಮೇ ತಿಂಗಳಲ್ಲಿ ಸಾಮಾಜಿಕ ಸೇವೆಯ ಅಡಿ ವಿಧಾನ ಪರಿಷತ್ಗೆ ನಾಮ ನಿರ್ದೇಶನಗೊಂಡಿದ್ದರು.

ಮಾಜಿ ಸಿಎಂ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿರುವ ಅವರು, ಈ ಹಿಂದೆ ಬೆಂಗಳೂರು ಮೇಯರ್ ಆಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ ಪಕ್ಷದ ಪ್ರಮುಖ ಹುದ್ದೆ ಇವರಿಗೆ ಒಲಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English