ಡಿ. 29 ರಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಸ್ವರ್ಣ ಮಹೋತ್ಸವ ಆಚರಣೆ

10:36 AM, Friday, December 28th, 2018
Share
1 Star2 Stars3 Stars4 Stars5 Stars
(No Ratings Yet)
Loading...

muslim-2ಮಂಗಳೂರು: ಸಮಾಜದಲ್ಲಿ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬಾಳಬೇಕು ಎಂಬ ಉದ್ದೇಶದಿಂದ 1968ರಲ್ಲಿ ಸ್ಥಾಪಿಸಲ್ಪಟ್ಟ ದ.ಕ‌ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯು 50 ವರ್ಷಗಳನ್ನು ಪೂರೈಸಿದ್ದು, ಈ 50 ವರ್ಷಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬಂದಿದೆ.

1968ರ ಕೋಮುಗಲಭೆಯ ನಂತರ ಸಮಾಜದಲ್ಲಿ ಎಲ್ಲಾ ಮತದವರು ಶಾಂತಿಯುತವಾಗಿ ಬಾಳುವಂತಾಗಬೇಕೆಂದು ಈ ಸಂಘಟನೆಯನ್ನು‌ ಅಂದಿನ ಹಿರಿಯರು ಸ್ಥಾಪಿಸಿದ್ದರು ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ. ಎಸ್. ಮೊಹಮ್ಮದ್ ಮಸೂದ್ ಹೇಳಿದರು.

ಆ ಬಳಿಕ ನಡೆದ ಬಾಬರಿ ಮಸೀದಿ ಗಲಾಟೆ, ಸೂರತ್ಕಲ್ನಲ್ಲಿ ನಡೆದಿರುವ ಕೋಮುಗಲಭೆಯ ಸಂದರ್ಭದಲ್ಲಿಯೂ ಮುಸ್ಲಿಂ ಸೆಂಟ್ರಲ್ ಕಮಿಟಿ ಮಧ್ಯ ಪ್ರವೇಶಿಸಿ ಸಮಾಜದ ಎಲ್ಲರೂ ಸೌಹಾರ್ದಯುತವಾಗಿ‌ ಬಾಳುವಂತೆ ಮಾಡಿತ್ತು ಎಂದು ಹೇಳಿದರು.

ಮುಸ್ಲಿಂ ಸೆಂಟ್ರಲ್ ಕಮಿಟಿಯು 50 ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಶನಿವಾರ ನಗರದ ಪುರಭವನದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಸ್ವರ್ಣ ಮಹೋತ್ಸವವನ್ನು ಆಚರಿಸಲಾಗುತ್ತಿದೆ.

ಈ ದಿನ ನಡೆಯುವ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಕ್ಫ್ ಸಚಿವ ಜಮೀರ್ ಅಹ್ಮದ್ ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಭಾಷಾ ತಂಙಳ್, ಹನೀಫ್ ಹಾಜಿ, ಮಮ್ತಾಝ್ ಅಲಿ ಉಪಸ್ಥಿತರಿದ್ದರು.

muslim

muslim-3

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English