ಪುಣೆ: 17 ವರ್ಷದ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಚಿಕ್ಕಪ್ಪ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಆಕೆ ಏಳು ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಪುಣೆಯ ಪಿಂಪ್ರಿ- ಚಿಂಚ್ವಾಡ್ ಎಂಬಲ್ಲಿ ನಡೆದಿದೆ.
ಹೊಟ್ಟೆ ನೋವಿನಿಂದ ನರಳುತ್ತಿದ್ದ ಬಾಲಕಿಯನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರದ ಕೃತ್ಯ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿಯೂ 9ನೇ ತರಗತಿಯಲ್ಲಿ ಓದುತ್ತಿದ್ದು, ಅತ್ಯಾಚಾರ ಎಸಗಿದ್ದ ಆರೋಪಿ ಈ ವಿಷಯ ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಾಲಕಿಯಿಂದ ಪ್ರಮಾಣ ಮಾಡಿಸಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗೆ ಮದುವೆ ಆಗಿದ್ದು, ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ. ಇತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಆರೋಪಿಯು ಘಟನೆ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆ ಆಗಿದ್ದಾನೆ. ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English