ಮಂಗಳೂರು : ಸಿಐಟಿಯು, ಎಐಟಿಯುಸಿ, ಎಚ್‌ಎಂಎಸ್ ಮತ್ತು ಇಂಟಕ್ ಸಹಿತ ಇತರ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಸಂಯೋಜಿತಗೊಂಡಿರುವ ಸಾರಿಗೆ ನೌಕರರು ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಅಂಗಡಿ, ಮಳಿಗೆ ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬ್ಯಾಂಕ್ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವುದರಿಂದ ಸೇವೆ ಭಾಗಶಃ ವ್ಯತ್ಯಯಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲಾ ರಿಕ್ಷಾ ಚಾಲಕರ ಸಂಘ ಬಂದ್‌ಗೆ ಬೆಂಬಲ ಸೂಚಿಸಿದೆಯಾದರೂ, ಕೆಲವು ಸಂಘಟನೆಗಳುಕೈಜೋಡಿಸಿಲ್ಲ. ಈ ಹಿನ್ನೆಲೆಯಲ್ಲಿ ನಗರದಲ್ಲಿ ರಿಕ್ಷಾಗಳು ಓಡಾಡುತ್ತಿವೆ. ಮಾಲ್ ಗಳು, ಚಿತ್ರಮಂದಿರಗಳು, ಪೆಟ್ರೋಲ್ ಬಂಕ್ ಗಳು, ಮೆಡಿಕಲ್ ಶಾಪ್ ಸಹಿತ ಅಗತ್ಯ ವಸ್ತು ಸೇವೆ ಲಭ್ಯವಿದೆ. ಆದರೆ ಮಂಗಳೂರಿನ ಪ್ರಮುಖ ವಾಣಿಜ್ಯ ಕೇಂದ್ರ ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಹಮಾಲಿ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿ ಕೆಲಸ ಸ್ಥಗಿತಗೊಳಿಸಿದ್ದಾರೆ.
ಖಾಸಗಿ ಎಕ್ಸ್‌ಪ್ರೆಸ್, ಸರ್ವಿಸ್ ಹಾಗೂ ಸಿಟಿಬಸ್ ಸಂಚಾರದಲ್ಲಿ ಸ್ವಲ್ಪ ಮಟ್ಟಿಗೆ ತೊಂದರೆ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಖಾಸಗಿ ಬಸ್ ಮಾಲೀಕರ ಸಂಘ ಬೆಂಬಲ ನೀಡಿಲ್ಲ . ಆದರೆ ಕೆಲ ಬಸ್ ಚಾಲಕರು ಹಾಗೂ ನಿರ್ವಹಕರು ಬಂದ್ ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಕೆಲ ಬಸ್ ಗಳು ಇಂದು ರಸ್ತೆಗಿಳಿದಿಲ್ಲ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಖಿಲ ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದ್ ಸ್ವಲ್ಪ ಮಟ್ಟಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನಜೀವನವನ್ನುಬಾಧಿಸಿದೆ.
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಖಾಸಗಿ ಬಸ್ ಗಳು ಮುಂಜಾನೆಯಿಂದಲೇ ರಸ್ತೆಗಿಳಿದು ಸಂಚಾರ ಆರಂಭಿಸಿವೆ. ಆಟೋ ರಿಕ್ಷಾಗಳು ಕೂಡ ಸಂಚಾರ ಆರಂಭಿಸಿವೆ.
Click this button or press Ctrl+G to toggle between Kannada and English