ಮಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದ್ದು,ಜೂಲೈ ೨೩ ಎಸ್ಐಟಿ ತಂಡ ತನಿಖೆ ಆರಂಭಿಸಲಿದೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಧರ್ಮಸ್ಥಳಕ್ಕೆ ತೆರಳಲಿದೆ. ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ.
ಎಫ್ಐಆರ್ , ಜಡ್ಜ್ ಮುಂದೆ ಕೊಟ್ಟ ಹೇಳಿಕೆ , ದೂರುದಾರನ ಹೇಳಿಕೆ ಇವುಗಳ ವಿಚಾರಣೆ ನಡೆಯಲಿದೆ. ಸದ್ಯ ಸಿಕ್ಕಿರೋ ಅಸ್ಥಿಪಂಜರದ ಡಿಎನ್ಎ ಮ್ಯಾಚಿಂಗ್ ಪ್ರಕ್ರಿಯೆ ನಡೆಯಲಿದೆ. ಇದಾದಮೇಲೆ ಬಾಕಿ ಉಳಿದಿರೋ ಅಸ್ಥಿಪಂಜರ ಹುಡುಕಾಟಕ್ಕೆ ಎಸ್ಐಟಿ ಮುಂದಾಗಲಿದೆ. ತನಿಖೆ ಬಳಿಕ ಕೋರ್ಟ್ಗೆ ದೋಷಾರೋಪಪಟ್ಟಿ ಸಲ್ಲಿಕೆ ಮಾಡಲಿದೆ.
1995ರಿಂದ 2014ರವರೆಗೆ ಧರ್ಮಸ್ಥಳದ ನೌಕರನಾಗಿದ್ದ ವ್ಯಕ್ತಿ . ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು.
ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದರು. ನಾನು ಜೀವ ಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ ಎಂದು ದೂರುದಾರ ಒತ್ತಾಯಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ವಿಶೇಷ ಸುದ್ದಿಗಳು, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









